6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಿಂದ ಬಂಧಿಸಿದ ಉಪ್ಪಿನಂಗಡಿ ಪೊಲೀಸರು - Karavali Times 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಿಂದ ಬಂಧಿಸಿದ ಉಪ್ಪಿನಂಗಡಿ ಪೊಲೀಸರು - Karavali Times

728x90

6 March 2026

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಿಂದ ಬಂಧಿಸಿದ ಉಪ್ಪಿನಂಗಡಿ ಪೊಲೀಸರು

ಉಪ್ಪಿನಂಗಡಿ, ಮಾರ್ಚ್ 06, ಮಾರ್ಚ್, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 21/2019, ಕಲಂ 504, 323, 324, 326, 506 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿರುವ  ಕಡಬ ನಿವಾಸಿ ವಿನೋದ್ ಅಲಿಯಾಸ್ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ ಎಂಬಾತ ಕಳೆದ 6 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆತನನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಿವರಾಮ ರೈ, ಸಂತೋಷ್ ಕೆ ಸಿ ಅವರು ಮಾ 5 ರಂದು ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದಿಂದ ಬಂಧಿಸಿದ ಉಪ್ಪಿನಂಗಡಿ ಪೊಲೀಸರು Rating: 5 Reviewed By: karavali Times
Scroll to Top