ಬಂಟ್ವಾಳ ಎಸ್.ವಿ.ಎಸ್. ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ - Karavali Times ಬಂಟ್ವಾಳ ಎಸ್.ವಿ.ಎಸ್. ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ - Karavali Times

728x90

11 March 2026

ಬಂಟ್ವಾಳ ಎಸ್.ವಿ.ಎಸ್. ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಬಂಟ್ವಾಳ, ಮಾರ್ಚ್ 11, 2026 (ಕರಾವಳಿ ಟೈಮ್ಸ್) : ಮಹಿಳೆಯರು ಸ್ವಾವಲಂಬಿಯಾಗುವುದರೊಂದಿಗೆ ತಮ್ಮ ಮೇಲಾಗುತ್ತಿರುವ ದೌರ್ಜನ್ಯ, ಅತ್ಯಾಚಾರ, ಹಿಂಸೆ, ಅಸಮಾನತೆಯನ್ನು ಧೈರ್ಯವಾಗಿ ಎದುರಿಸಿ ಪುರುಷರಿಗೆ ಸಮಾನವಾಗಿ ಬದುಕಬೇಕೆಂದು ಬಿ.ಆರ್.ಎಂ.ಪಿ.ಸಿ. ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಪೂರ್ಣೇಶ್ವರಿ ಭಟ್ ಕರೆ ನೀಡಿದರು. 

ಬಂಟ್ವಾಳ ಎಸ್ ವಿ ಎಸ್ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. 

ಅಧ್ಯಕ್ಷತೆ ವಹಿಸಿದ್ದ ಎಸ್ ವಿ ಎಸ್ ಕಾಲೇಜು ಪ್ರಾಂಶುಪಾಲ ಪ್ರೊ ಎಂ ಡಿ ಮಂಚಿ ಮಾತನಾಡಿ, ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಸಮಪಾಲು-ಸಮಬಾಳು ಮಾತಿಗೆ ಬದ್ಧರಾಗಿ ಎಲ್ಲಾ ರಂಗದಲ್ಲೂ ಪ್ರಗತಿ ಸಾಧಿಸಿ ಸಮಾಜದಲ್ಲಿ ತಮ್ಮ ಸ್ಥಾನಮಾನದ ಅಗತ್ಯತೆಯನ್ನು ಸಾಬೀತುಪಡಿಸಬೇಕಾದ ಅಗತ್ಯವಿದೆ. ಮಹಿಳೆ ಜಾಗೃತಗೊಂಡಾಗ ಸಂಘಟಿತರಾದಾಗ ಆಕೆಯೂ ಪುರುಷನಿಗೆ ಸಮಾನವಾಗಿ ಬೆಳೆಯಬಹುದು ಎಂದರು. 

ಎಸ್ ವಿ ಎಸ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಶಿಧರ್ ಕೆ, ಎಸ್ ವಿ ಎಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚೈತ್ರಾ ಶೆಟ್ಟಿ, ಪೂರ್ವ ಪ್ರಾಥಮಿಕ ಶಾಲೆಯ ಶ್ರೀಮತಿ ವೀಣಾ ದೇವಾಡಿಗ ಉಪಸ್ಥಿತರಿದ್ದರು. 

ಬಿಸಿಎ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸಹನಾ ಸ್ವಾಗತಿಸಿ, ಎಸ್ ವಿ ಎಸ್ ಪದವಿಪೂರ್ವ ಕಾಲೇಜು ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವಿತಾ ವಂದಿಸಿದರು. ರಾಲ್ವಿನ್ ಲೋಯ್ಡ್ ರೋಡ್ರಿಗಸ್ ಅನಿಸಿಕೆ ವ್ಯಕ್ತಪಡಿಸಿದರು. ನಿಧಿ ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿನಿ ವೀಕ್ಷಿತಾ ಗಟ್ಟಿ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಎಸ್.ವಿ.ಎಸ್. ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Rating: 5 Reviewed By: karavali Times
Scroll to Top