ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್ - Karavali Times ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್ - Karavali Times

728x90

23 March 2026

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು, ಮಾರ್ಚ್ 23, 2026 (ಕರಾವಳಿ ಟೈಮ್ಸ್) : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಾರ್ಚ್ 22 ರಂದು ಪ್ರಕರಣ ಬೇಧಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. 

ಬಂಧಿತರನ್ನು ತೊಕ್ಕೊಟ್ಟು, ಪೆರ್ಮನ್ನೂರು ಚೆಂಬುಗುಡ್ಡೆ ನಿವಾಸಿ ದಿವಂಗತ ಅಬ್ದುಲ್ ಖಾದರ್ ಎಂಬವರ ಪುತ್ರ ಹೈದರ್ ಅಲಿಯಾಸ್ ಹೈದರ್ ಅಲಿ (53), ಚೆಂಬುಗುಡ್ಡೆ ಜುಮಾ ಮಸೀದಿ ಎದುರುಗಡೆ ಮಟನ್ ನವಾಝ್ ಅವರ ಬಾಡಿಗೆ ಮನೆಯಲ್ಲಿ ವಾಸವಾಗಿರುವ ದಿವಂಗತ ಅಬೂಬಕ್ಕರ್ ಅವರ ಪುತ್ರ ಮೊಹಮ್ಮದ್ ಸಜಾದ್ (29) ಹಾಗೂ ಮೂಲತಃ ಉಡುಪಿ ಜಿಲ್ಲೆ ಕಾಪು ತಾಲೂಕು, ಶಿರ್ವ, ಗುರುಂಜಾಮನೆ ನಿವಾಸಿ, ಪ್ರಸ್ತುತ ಮಂಗಳೂರು-ಪಂಪ್ ವೆಲ್ ಉಜ್ಜೋಡಿ ರಾಧಾ ರೆಸಿಡೆನ್ಸಿ ಫ್ಲಾಟ್ ನಂಬ್ರ 103ರ ನಿವಾಸಿ ಜಾನ್ ಐವನ್ ಮೆನೆಜಸ್ ಅವರ ಪುತ್ರ ಜೈಸನ್ ಮೆನೆಜಸ್ (26) ಎಂದು ಹೆಸರಿಸಲಾಗಿದೆ. 

ಬಂಧಿತ ಆರೋಪಿತರಿಂದ 2.50 ಲಕ್ಷ ರೂಪಾಯಿ ಮೌಲ್ಯದ 26 ಗ್ರಾಂ ತೂಕದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, 37 ಸಾವಿರ ರೂಪಾಯಿ ನಗದು ಹಣ, 5 ಮೊಬೈಲ್ ಫೆÇೀನ್, ತೂಕಮಾಪನ, ಕೆಎ19 ಎಸಿ2245 ನೋಂದಣಿ ಸಂಖ್ಯೆಯ ಅಟೋ ರಿಕ್ಷಾ ಸಹಿತ ಒಟ್ಟು 4,37,500/- ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಹೈದರ್ ಅಲಿಯಾಸ್ ಹೈದರ್ ಆಲಿ ಎಂಬಾತನ ಮೇಲೆ ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪೆÇಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರರಣ ಹಾಗೂ 2024ನೇ ವರ್ಷದಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿದ್ದು, ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರಿಗೆ ಹಲ್ಲೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿರುತ್ತದೆ. 

ಈ ಮಾದಕ ವಸ್ತು ಮಾರಾಟ/ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ : ಅಟೋ ರಿಕ್ಷಾದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್ Rating: 5 Reviewed By: karavali Times
Scroll to Top