ಬಂಟ್ವಾಳ, ಮಾರ್ಚ್ 31, 2026 (ಕರಾವಳಿ ಟೈಮ್ಸ್) : ಪರವಾನಿಗೆ ರಹಿತವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ಮಾ 29 ರಂದು ನಡೆದಿದೆ.
ಮಾ 29 ರಂದು ವಿಟ್ಲ ಪೊಲೀಸ್ ಠಾಣಾ ಎಚ್ ಸಿ ಶ್ರೀಕುಮಾರ್ ಅವರು ಮೇಗಿನಪೇಟೆ ಎಂಬಲ್ಲಿ ಟ್ರಾಫಿಕ್ ಕರ್ತವ್ಯ ನಿರ್ವಹಿಸುತ್ತಿದ್ದಾಗ, ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎಲ್58 ಬಿ6593 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ನಿಲ್ಲಿಸಿ ವಿಚಾರಿಸಿದಾಗ ಲಾರಿ ಚಾಲಕ ವಿಟ್ಲ ಕಸಬಾ ಗ್ರಾಮದ ನಿವಾಸಿ ಅಣ್ಣಪ್ಪ ಎಂಬವರು ಕೆಂಪು ಕಲ್ಲು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಯಾವುದೇ ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ ಮಾಡಿದ ಬಗ್ಗೆ ಕಲ್ಲುಗಳ ಸಹಿತ ಲಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.











0 comments:
Post a Comment