ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಬಿ. ಅಬ್ದುಲ್ಲ ಅವರಿಂದ ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ - Karavali Times ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಬಿ. ಅಬ್ದುಲ್ಲ ಅವರಿಂದ ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ - Karavali Times

728x90

2 April 2026

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಬಿ. ಅಬ್ದುಲ್ಲ ಅವರಿಂದ ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ

ಬಂಟ್ವಾಳ, ಎಪ್ರಿಲ್ 02, 2026 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷ ಎ ಬಿ ಅಬ್ದುಲ್ಲಾ ಕೊಳ್ನಾಡು ಅವರು ಕೇರಳ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಗಡಿ ಪ್ರದೇಶವಾದ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಮೈತ್ರಿಕೂಟದ ಅಭ್ಯರ್ಥಿ ಎ ಕೆ ಎಂ ಅಶ್ರಫ್ ಅವರ ಪರವಾಗಿ ಕ್ಷೇತ್ರದ ವಿವಿಧೆಡೆ ಮತ ಪ್ರಚಾರ ಕೈಗೊಂಡರು. 

ಕ್ಷೇತ್ರ ವ್ಯಾಪ್ತಿಯ ತಲೆಕ್ಕಿ, ಬಾಕ್ರಬೈಲು, ಪಾತೂರು ಮೊದಲಾದೆಡೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಬಿರುಸಿನ ಪ್ರಚಾರ ಕೈಗೊಂಡ ಅವರು ಕೇರಳದಲ್ಲಿ ಈ ಬಾರಿ ಯುಡಿಎಫ್ ಹವಾ ಇದ್ದು, ಮೈತ್ರಿಕೂಟದ ಅಭ್ಯರ್ಥಿಯನ್ನು ಅತ್ಯಧಿಕ ಮತಗಳಿಂದ ಚುನಾಯಿಸುವಂತೆ ಮನವಿ ಮಾಡಿಕೊಂಡರು. 

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಸಹಿತ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎ.ಬಿ. ಅಬ್ದುಲ್ಲ ಅವರಿಂದ ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ Rating: 5 Reviewed By: karavali Times
Scroll to Top