ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅನುಮತಿ ರಹಿತ ಬ್ಯಾನರ್ ಅಳವಡಿಕೆಗೆ ನಿರ್ಬಂಧ - Karavali Times ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅನುಮತಿ ರಹಿತ ಬ್ಯಾನರ್ ಅಳವಡಿಕೆಗೆ ನಿರ್ಬಂಧ - Karavali Times

728x90

2 April 2026

ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅನುಮತಿ ರಹಿತ ಬ್ಯಾನರ್ ಅಳವಡಿಕೆಗೆ ನಿರ್ಬಂಧ

ಮಂಗಳೂರು, ಎಪ್ರಿಲ್ 02, 2026 (ಕರಾವಳಿ ಟೈಮ್ಸ್) : ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ಬ್ಯಾನರ್ ಪ್ರದರ್ಶಿಸುತ್ತಿರುವುದು ಕಂಡು ಬಂದಿದ್ದು, ಅನುಮತಿ ಮುಕ್ತಾಯಗೊಂಡ ನಂತರವೂ ತೆರವುಗೊಳಿಸದೇ ಇರುವುದರಿಂದ ಪಟ್ಟಣ ಪಂಚಾಯತ್ ವತಿಯಿಂದ ತೆರವುಗೊಳಿಸಿ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಆದುದರಿಂದ ಈಗಾಗಲೇ ಅಳವಡಿಸಿರುವ ಬ್ಯಾನರ್ ಗಳಿಗೆ ಸಂಬಂಧಿಸಿ ಮುಂದಿನ 10 ದಿನಗಳ ಒಳಗೆ ಅನುಮತಿ ರಹಿತ ಬ್ಯಾನರ್ ಗಳನ್ನು ತೆರವುಗೊಳಿಸಬೇಕು. ಮುಂದಿನ ದಿನಗಳಲ್ಲಿ ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬ್ಯಾನರ್ ಅಳವಡಿಸುವವರು ಕಡ್ಡಾಯವಾಗಿ ಅನುಮತಿ ಪಡೆದು ಅನುಮತಿ ನೀಡಲಾದ ಸ್ಥಳದಲ್ಲಿಯೇ ಅಳವಡಿಸಬೇಕು. ತಪ್ಪಿದ್ದಲ್ಲಿ ಅನುಮತಿ ರಹಿತ ಬ್ಯಾನರ್ ಗಳನ್ನು ಪಟ್ಟಣ ಪಂಚಾಯತ್ ವತಿಯಿಂದ ತೆರವುಗೊಳಿಸಿ ಅಳವಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಜಪೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಬಜ್ಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅನುಮತಿ ರಹಿತ ಬ್ಯಾನರ್ ಅಳವಡಿಕೆಗೆ ನಿರ್ಬಂಧ Rating: 5 Reviewed By: karavali Times
Scroll to Top