ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಜಿ.ಪಂ. ಸಿಇಒ ಸೂಚನೆ : ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದಲ್ಲಿ ಎಫ್.ಐ.ಆರ್ ದಾಖಲು - Karavali Times ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಜಿ.ಪಂ. ಸಿಇಒ ಸೂಚನೆ : ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದಲ್ಲಿ ಎಫ್.ಐ.ಆರ್ ದಾಖಲು - Karavali Times

728x90

2 April 2026

ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಜಿ.ಪಂ. ಸಿಇಒ ಸೂಚನೆ : ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದಲ್ಲಿ ಎಫ್.ಐ.ಆರ್ ದಾಖಲು

ಮಂಗಳೂರು, ಎಪ್ರಿಲ್ 02, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕಾರ್ಭಾರಿ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವೀಡಿಯೋ ಸಭೆ ನಡೆಯಿತು.

ಗ್ರಾಮ ಪಂಚಾಯತಿಗಳÀ ವ್ಯಾಪ್ತಿಯ ರಸ್ತೆ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವ ಮತ್ತು ಸುಡುವ ಪ್ರಕರಣಗಳನ್ನು ಗುರುತಿಸಿ ದಂಡ ವಿಧಿಸಬೇಕು. ದಂಡ ಪಾವತಿಸದೇ ಇದ್ದಲ್ಲಿ ಸ್ಥಳೀಯ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲು ಸೂಚಿಸಿದರು. ಈ ಬಗ್ಗೆ ಕೂಡಲೇ ಪ್ರತೀ ತಾಲೂಕಿನಿಂದ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ವರದಿ ನೀಡುವಂತೆ ಸೂಚಿಸಿದರು.

ಪ್ರತೀ ತಿಂಗಳು 1 ಮತ್ತು 3ನೇ ಶನಿವಾರದಂದು ಆಯೋಜಿಸುವ ಸ್ವಚ್ಛ ಶನಿವಾರ ಸ್ವಚ್ಛತಾ ಕಾರ್ಯದಂದು  ಗ್ರಾಮ ಪಂಚಾಯತಿಗಳು ತಮ್ಮ ವ್ಯಾಪ್ತಿಯ ಎಲ್ಲಾ ರಸ್ತೆ ಇಕ್ಕೆಲಗಳನ್ನು ಸ್ವಚ್ಛಗೊಳಿಸಬೇಕು. ಸ್ವಚ್ಛ ಸಂಕೀರ್ಣ ಹೊಂದಿರದ 63 ಗ್ರಾಮ ಪಂಚಾಯತಿಗಳಲ್ಲಿ ಘಟಕ ನಿರ್ಮಾಣದ ಬಗ್ಗೆ ತಾಲೂಕು ಪಂಚಾಯತ್ ಅನಿರ್ಬಂಧಿತ ನಿಧಿ ಮತ್ತು ಗ್ರಾಮ ಪಂಚಾಯತಿಗಳಲ್ಲಿ ಲಭ್ಯವಿರುವ ಅನುದಾನವನ್ನು ಬಳಸಿ ಕನಿಷ್ಟ 1000 ಚದರ ಅಡಿ ವಿಸ್ತೀರ್ಣದ ಘಟಕ ನಿರ್ಮಾಣಕ್ಕೆ ಕ್ರಿಯಾ ಯೋಜನೆ ತಯಾರಿಸುವಚಿತೆ ಅವರು ಸೂಚಿಸಿದರು.

ನೈರ್ಮಲ್ಯ ತ್ಯಾಜ್ಯ ನಿರ್ವಹಣೆಗಾಗಿ ಮೊದಲ ಹಂತದಲ್ಲಿ 92 ಗ್ರಾಮ ಪಂಚಾಯತಿಗಳನ್ನು ಗುರುತಿಸಲಾಗಿದ್ದು, ಇವುಗಳಲ್ಲಿ ತ್ಯಾಜ್ಯ ನಿರ್ವಹಣಾ ಸಂಸ್ಥೆಯೊಂದಿಗೆ 48 ಗ್ರಾಮ ಪಂಚಾಯತಿಗಳು ಕೂಡಲೇ ಒಪ್ಪಂದ ಮಾಡಿಕೊಳ್ಳಬೇಕು.  ನಿರ್ಬಂಧಿತ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಈಗಾಗಲೇ ಹೊರಡಿಸಲಾಗಿರುವ ಸುತ್ತೋಲೆಯಂತೆ ಗ್ರಾಮ ಪಂಚಾಯತಿಗಳಲ್ಲಿ ಈ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಮಾರಾಟ, ವಿತರಣೆ ಮಾಡುವುದರ ನಿಯಂತ್ರಣಕ್ಕಾಗಿ ಪರಿಶೀಲನೆ, ದಾಳಿ ನಡೆಸಿ ದಂಡ ವಿಧಿಸಲು ಮತ್ತು ಪರ್ಯಾಯ ವಸ್ತುಗಳ ಬಳಕೆಯನ್ನು ಹೆಚ್ಚಿಸಲು ಕ್ರಮವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕ್ರಮವಹಿಸಬೇಕು. ಈ ಬಗ್ಗೆ ದಂಡ ಸಂಗ್ರಹಣೆಗಾಗಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತಿಗಳಿಗೆ ಗುರಿ ನಿಗದಿಪಡಿಸಿ, ಸಂಗ್ರಹಣೆಯಾದ ದಂಡ ವಿಧಿಸಲು ಸೂಚಿಸಿದರು. 

ಸಭೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್  ಉಪಕಾರ್ಯದರ್ಶಿ ಜಯಲಕ್ಷ್ಮೀ ರಾಯಕೋಡ್, ಯೋಜನಾ ಅಧಿಕಾರಿ ಇ ಜಯರಾಮ್, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕರು ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಜಿ.ಪಂ. ಸಿಇಒ ಸೂಚನೆ : ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದಲ್ಲಿ ಎಫ್.ಐ.ಆರ್ ದಾಖಲು Rating: 5 Reviewed By: karavali Times
Scroll to Top