ಬಂಟ್ವಾಳ, ಎಪ್ರಿಲ್ 06, 2026 (ಕರಾವಳಿ ಟೈಮ್ಸ್) : ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಅಮ್ಟಾಡಿ ಗ್ರಾಮದ ಲೊರೆಟ್ಟೊ ಎಂಬಲ್ಲಿ ಎಪ್ರಿಲ್ 3 ರಂದು ಸಂಭವಿಸಿದೆ.
ಗಾಯಗೊಂಡ ಪಾದಚಾರಿ ಮಹಿಳೆಯನ್ನು ಇಲ್ಲಿನ ನಿವಾಸಿ ಸಿಂಥಿಯಾ ಡಿ ಸಓಜ (77) ಎಂದು ಹೆಸರಿಸಲಾಗಿದೆ. ಇವರು ಎ 3 ರಂದು ಲೊರೆಟ್ಟೊ ಚರ್ಚಿನಲ್ಲಿ ಪ್ರಾರ್ಥನೆ ಮಾಡಿ ಮನೆ ಕಡೆಗೆ ತೆರಳಲು ಲೊರೆಟ್ಟೊ ಎಂಬಲ್ಲಿ ಬಿ ಸಿ ರೋಡು-ಮೂಡಬಿದ್ರೆ ರಾಜ್ಯ ಹೆದ್ದಾರಿಯನ್ನು ದಾಟುತ್ತಿರುವ ವೇಳೆ ಬಂಟ್ವಾಳ ಕಡೆಯಿಂದ ಅವಿನಾಶ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆಸೆಯಲ್ಪಟ್ಟ ಸಿಂಥಿಯಾ ಅವರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯರು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment