ಬಂಟ್ವಾಳ ಪುರಸಭಾ ಕುಡಿಯುವ ನೀರನ್ನು ತೋಟಕ್ಕೆ ಬಳಸಿದರೆ ಕಠಿಣ ಕ್ರಮ : ಮುಖ್ಯಾಧಿಕಾರಿ ತೀರ್ಥಪ್ರಸಾದ್ ಎಚ್ಚರಿಕೆ - Karavali Times ಬಂಟ್ವಾಳ ಪುರಸಭಾ ಕುಡಿಯುವ ನೀರನ್ನು ತೋಟಕ್ಕೆ ಬಳಸಿದರೆ ಕಠಿಣ ಕ್ರಮ : ಮುಖ್ಯಾಧಿಕಾರಿ ತೀರ್ಥಪ್ರಸಾದ್ ಎಚ್ಚರಿಕೆ - Karavali Times

728x90

24 April 2026

ಬಂಟ್ವಾಳ ಪುರಸಭಾ ಕುಡಿಯುವ ನೀರನ್ನು ತೋಟಕ್ಕೆ ಬಳಸಿದರೆ ಕಠಿಣ ಕ್ರಮ : ಮುಖ್ಯಾಧಿಕಾರಿ ತೀರ್ಥಪ್ರಸಾದ್ ಎಚ್ಚರಿಕೆ

ಬಂಟ್ವಾಳ, ಎಪ್ರಿಲ್ 24, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಗ್ರಾಮದ ಬೊಂಡಾಲ, ನರಹರಿ ಪರ್ವತ ಬೋಳಂಗಡಿ ಪ್ರದೇಶ, ಬಿ ಕಸ್ಬಾ ಗ್ರಾಮದ ನೇರಂಬೋಳು ಪ್ರದೇಶ ಮತ್ತು ಬಿ ಮೂಡ ಗ್ರಾಮದ ಕೈಕಂಬ ಎತ್ತರ ಪ್ರದೇಶದಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ ಉಂಟಾಗಿ ಸಾರ್ವಜನಿಕರಿಗೆ ನೀರಿನ ಸಮಸ್ಯೆ ಉಂಟಾಗಿದೆ. ಸಾರ್ವಜನಿಕರು ಪುರಸಭಾ ಕುಡಿಯುವ ನೀರನ್ನು ತೋಟಕ್ಕೆ ಹಾಗೂ ಇನ್ನಿತರ ಉದ್ದೇಶಗಳಿಗೆ ಬಳಸದಂತೆ ಪುರಸಭಾ ಮುಖ್ಯಾಧಿಕಾರಿ ತೀರ್ಥಪ್ರಸಾದ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸುವುದು ಕಂಡು ಬಂzಲ್ಲಿ ನೀರಿನ ಸಂಪರ್ಕವನ್ನು ಶಾಶ್ವತವಾಗಿ ರದ್ದುಪಡಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದವರು ಎಚ್ಚರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಪುರಸಭಾ ಕುಡಿಯುವ ನೀರನ್ನು ತೋಟಕ್ಕೆ ಬಳಸಿದರೆ ಕಠಿಣ ಕ್ರಮ : ಮುಖ್ಯಾಧಿಕಾರಿ ತೀರ್ಥಪ್ರಸಾದ್ ಎಚ್ಚರಿಕೆ Rating: 5 Reviewed By: karavali Times
Scroll to Top