ಮಂಗಳೂರು, ಎಪ್ರಿಲ್ 28, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರದ ಕಂಕನಾಡಿ ಬಳಿ 2022 ರ ನವೆಂಬರ್ 19 ರಂದು ನಡೆದಿದ್ದ ಅಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಎಂಬಾತನ ಆರೋಪ ಸಾಬೀತಾಗಿದ್ದು, ಆತನನ್ನು ದೋಷಿ ಎಂದು ಬೆಂಗಳೂರಿನ ಎನ್ ಐ ಎ ವಿಶೇಷ ನ್ಯಾಯಾಲಯ ಘೋಷಿಸಿದೆ. ಎಪ್ರಿಲ್ 17 ರಂದು ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಆತನಿಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಬಾಂಬ್ ಹೊತ್ತು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ ಭಾರಿ ಅನಾಹುತವೊಂದು ತಪ್ಪಿತ್ತು. ಸ್ಫೋಟದಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ಇಬ್ಬರೂ ಗಾಯಗೊಂಡಿದ್ದರು. ದೇಶದ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ ಐ ಎ ತನಿಖೆಗೆ ವಹಿಸಲಾಗಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ ಐ ಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಶಾರಿಕ್ ತನ್ನ ಮೇಲಿರುವ ಎಲ್ಲಾ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್‍ಐಎ ವಿಶೇಷ ನ್ಯಾಯಾಲಯವು, ಆರೋಪಿ ವಿರುದ್ಧದ ಸಾಕ್ಷ್ಯಗಳನ್ನು ಪುರಸ್ಕರಿಸಿದ್ದು, ಹಲವು ಸೆಕ್ಷನ್‍ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ.











0 comments:
Post a Comment