ಮಂಗಳೂರು, ಎಪ್ರಿಲ್ 06, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಪ್ರಿಲ್ 10 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಎಪ್ರಿಲ್ 10 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 9.30ಕ್ಕೆ ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಮಂಗಳೂರು ಫಿಸಿಕಾನ್-2026 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಕಾರ್ಯಕ್ರಮ, 10.40ಕ್ಕೆ ಲೇಡಿಗೋಶನ್ ಆಸ್ಪತ್ರೆಯಲ್ಲಿ ಪವರ್ ಗ್ರಿಡ್ ಕಾಪೆರ್Çರೇಶನ್ ವತಿಯಿಂದ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ, 11.15 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಭೆಗಳು, ಸಂಜೆ 4ಕ್ಕೆ ಶಕ್ತಿನಗರ ಕಲಾಂಗಣದಲ್ಲಿ ಪ್ರಥಮ ವಿಶ್ವಕೊಂಕಣಿ ಮಹಾ ಸಮಾವೇಶ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ, 5.30ಕ್ಕೆ ಸಕ್ರ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಭೇಟಿ, ರಾತ್ರಿ 9.30ಕ್ಕೆ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.











0 comments:
Post a Comment