ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸರಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ - Karavali Times ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸರಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ - Karavali Times

728x90

22 April 2026

ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸರಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ

ಮಂಗಳೂರು, ಎಪ್ರಿಲ್ 22, 2026 (ಕರಾವಳಿ ಟೈಮ್ಸ್) : ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ  ಅತೀ ಹೆಚ್ಚು ಅಂಕ ಗಳಿಸಿ ಸಾಧನೆÀಗೈದ ಜಿಲ್ಲೆಯ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಪ್ರಿಲ್ 22 ರಂದು ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಮಾತನಾಡಿ, ಸರ್ಕಾರಿ ಕಾಲೇಜುಗಳಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಸಾಧನೆಗೈಯುವ ಮೂಲಕ ತಮ್ಮ ಪೋಷಕರಿಗೆ ಮತ್ತು  ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮಕ್ಕಳ ಸಾಧನೆ ಹಿಂದೆ  ಪೋಷಕರ ಕೊಡುಗೆ ಇದೆ. ವಿದ್ಯಾರ್ಥಿಗಳು ವಿದ್ಯೆಯ ಹಿಂದೆ  ಹೋಗಬೇಕು,  ಹಣದ ಹಿಂದೆ ಹೋಗಬಾರದು. ವಿದ್ಯೆಯ ಹಿಂದೆ ಹೋದರೆ ಹಣ ತಾನಾಗಿಯೇ ಬರುತ್ತದೆ ಎಂದರು.

ಸರಕಾರಿ ಕಾಲೇಜುಗಳ ಸೀಮಿತ ಸವಲತ್ತುಗಳ ಮಧ್ಯೆ ವಿದ್ಯಾರ್ಥಿಗಳು ಸಾಧನೆಗೈದಿರುವುದು ಶ್ಲಾಘನೀಯ ಎಂದು ಡೀಸಿ ಶ್ಲಾಘಿಸಿದರು. 

ಕಲಾ ವಿಭಾಗದಲ್ಲಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುಶ್ಮಿತಾ (582 ಅಂಕ), ವಾಣಿಜ್ಯ  ವಿಭಾಗದಲ್ಲಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನೇಹಾ ಎಂ ಡಿ (591), ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನ ದಕ್ಷಾ (591), ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನ ಮಾನ್ವಿಕಾ (589), ವಿಜ್ಞಾನ ವಿಭಾಗದಲ್ಲಿ ಪುತ್ತೂರು ಸರಕಾರಿ ಪದವಿಪೂರ್ವ ಕಾಲೇಜಿನ ಪವಿತ್ರ ಎಸ್.ಪಿ (586),  ಪೂಂಜಾಲಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಸಾತ್ವಿ ಬಾಳಿಗ (583) ಅವರನ್ನು ಸನ್ಮಾನಿಸಲಾಯಿತು.  

ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಜಿಲ್ಲೆಯ 5 ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರನ್ನು ಜಿಲ್ಲಾಧಿಕಾರಿಗಳು ಸನ್ಮಾಸಿದರು. ಬೆಳ್ಳಾರೆ, ಗುತ್ತಿಗಾರು, ಕೊಯ್ಯೂರು, ಐವರ್ನಾಡು ಮತ್ತು ನಾಲ್ಯಪದವು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಅಪರ ಜಿಲ್ಲಾಧಿಕಾರಿ ರಾಜು ಕೆ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ರಾಜೇಶ್ವರಿ ಮೊದಲಾದವರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸರಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸನ್ಮಾನ Rating: 5 Reviewed By: karavali Times
Scroll to Top