ಮಂಗಳೂರು, ಎಪ್ರಿಲ್ 22, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎಪ್ರಿಲ್ 24 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಎಪ್ರಿಲ್ 24 ರಂದು ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 9 ಗಂಟೆಗೆ ಉಳ್ಳಾಲ ತಾಲೂಕಿನ ಕುರ್ನಾಡು ಪಶು ಚಿಕಿತ್ಸಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 9.30ಕ್ಕೆ ಮುಡಿಪು ಶ್ರೀ ಕೃಷ್ಣ ಧ್ಯಾನ ಮಂದಿರದಲ್ಲಿ ಬೃಹತ್ ಕೃಷಿ ಮೇಳ ಹಾಗೂ ಮುಡಿಪು ಉತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಬೆಳಿಗ್ಗೆ 11:30ಕ್ಕೆ ಸಚಿವರು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.











0 comments:
Post a Comment