ಮಂಗಳೂರು, ಮೇ 01, 2026 (ಕರಾವಳಿ ಟೈಮ್ಸ್) : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿರುವ ಕೆ.ಎ.ಎಸ್. ಅಧಿಕಾರಿ ಮುಹಮ್ಮದ್ ಇಸಾಕ್ ಅವರು ಎಪ್ರಿಲ್ 30ರಂದು ಸರಕಾರಿ ಸೇವೆಯಿಂದ ನಿವೃತ್ತರಾದರು.
1988ರಲ್ಲಿ ಸರಕಾರಿ ಸೇವೆಗೆ ಸೇರ್ಪಡೆಗೊಂಡ ಅವರು ಕಂದಾಯ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕ, ಕಂದಾಯ ನಿರೀಕ್ಷಕ, ಶಿರಸ್ತೇದಾರ್ ಮತ್ತು ಗ್ರೇಡ್-2 ತಹಶೀಲ್ದಾರ್ ಹುದ್ದೆ ಸೇರಿದಂತೆ ಹಾಸನ ಜಿಲ್ಲೆಯಲ್ಲಿ ಸುಮಾರು 28 ವರ್ಷಗಳ ಕಾಲ ಸೇವೆಗೈದಿದ್ದರು. ಬಳಿಕ ಗ್ರೇಡ್-1 ತಹಶೀಲ್ದಾರರಾಗಿ ಬಡ್ತಿ ಪಡೆದ ಅವರು, ಮೂಡಬಿದ್ರೆ, ಕಾರ್ಕಳ, ಕಾಪು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ತಾಲೂಕುಗಳಲ್ಲಿ ಕಾರ್ಯನಿರ್ವಹಿಸಿದ್ದರು. ನಂತರ ಉಡುಪಿ ಜಿಲ್ಲೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕರು ಹಾಗೂ ವಿಶೇಷ ಭೂನ್ಯಾಯ ಮಂಡಳಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸಿ, ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದರು. 38 ವರ್ಷಗಳ ಕಾಲ ಸರಕಾರಿ ಸೇವೆಯಲ್ಲಿದ್ದ ಅವರು ಎಪ್ರಿಲ್ 30 ರಂದು ನಿವೃತ್ತರಾದರು.
ಬೀಳ್ಕೊಡುಗೆ
ಮುಹಮ್ಮದ್ ಇಸಾಕ್ ಅವರ ನಿವೃತ್ತಿ ಪ್ರಯುಕ್ತ ಎಪ್ರಿಲ್ 30 ರಂದು ನಗರದ ಮಿನಿ ವಿಧಾನಸೌಧ ಆವರಣದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಯಿತು. ಈ ಸಂದರ್ಭ ಹಿರಿಯ ಅಧಿಕಾರಿಗಳು, ಕಚೇರಿ ಸಿಬ್ಬಂಧಿಗಳು ಹಾಗೂ ನಿವೃತ್ತ ಅಧಿಕಾರಿಗಳು ಉಪಸ್ಥಿತರಿದ್ದು, ಶುಭ ಹಾರೈಸಿದರು.











0 comments:
Post a Comment