ಮಂಗಳೂರು, ಎಪ್ರಿಲ್ 22, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್ಸೆಸ್ಸೆಲ್ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೊಗ್ರಾಮಿಂಗ್ ಆಂಡ್ ಸಿಸ್ಟಮ್ ಎಡ್ಮಿನಿಸ್ಟ್ರೇಟಿವ್ ಎಸಿಸ್ಟೆಂಟ್ ವೃತ್ತಿಗಳಲ್ಲಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಎಪ್ರಿಲ್ 21 ರಿಂದ ಮೇ 8ರೊಳಗಾಗಿ ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಮೇ 12 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











0 comments:
Post a Comment