ಮಂಗಳೂರು, ಎಪ್ರಿಲ್ 02, 2026 (ಕರಾವಳಿ ಟೈಮ್ಸ್) : ಕೇರಳ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಯುಡಿಎಫ್ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಲು ಪ್ರಯತ್ನ ತೀವ್ರಗೊಳಿಸುವಂತೆ ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ ಕಾರ್ಯಕರ್ತರಿಗೆ ಕರೆ ನೀಡಿದರು.
ಸಭೆಯಲ್ಲಿ ಮಂಜೇಶ್ವರ, ಕಾಸರಗೋಡು, ಉದುಮ ಹಾಗೂ ತ್ರಿಕಾರಿಪುರ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಸಮಗ್ರ ಚುನಾವಣಾ ತಂತ್ರ ರೂಪಿಸಲಾಯಿತು. ಗಡಿ ಭಾಗದ ಕ್ಷೇತ್ರಗಳಿಗೆ ಜಿಲ್ಲೆಯ ಪ್ರಮುಖರು ಮತ್ತು ಕಾರ್ಯಕರ್ತರನ್ನು ನಿಯೋಜಿಸಿ, ಸಂಘಟಿತ, ವೇಗವಾದ ಮತ್ತು ಪರಿಣಾಮಕಾರಿ ಪ್ರಚಾರಕ್ಕೆ ಇದೇ ವೇಳೆ ಚಾಲನೆ ನೀಡಲಾಯಿತು.













0 comments:
Post a Comment