ಕೋಳಿ ಅಂಕದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಕೋಳಿ ಅಂಕದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

13 April 2026

ಕೋಳಿ ಅಂಕದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ, ಎಪ್ರಿಲ್ 13, 2026 (ಕರಾವಳಿ ಟೈಮ್ಸ್) : ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳು ಬೆದರಿಕೆ ಹಾಕಿ ಪರಾರಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಮಾಡ ಎಂಬಲ್ಲಿ ಎಪ್ರಿಲ್ 12 ರಂದು ಸಂಜೆ ವೇಳೆ ನಡೆದಿದೆ. 

ವಿಟ್ಲ ಕಸಬ ಗ್ರಾಮದ ಮಾಡ ಎಂಬಲ್ಲಿ ಅಕ್ರಮ ಕೋಳಿ ಅಂಕ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೆÇಲೀಸ್ ಠಾಣಾ ಪಿಎಸ್ಸೈ ರಾಮಕೃಷ್ಣ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿ ಸುಮಾರು 20 ರಿಂದ 25 ಜನ ಗುಂಪು ಸೇರಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಟಾಟ ಆಡುತ್ತಿರುವುದು ಕಂಡು ಬಂದಿದೆ. ದಾಳಿ ವೇಳೆ ಜೂಜಾಟದಲ್ಲಿ ತೊಡಗಿಕೊಂಡಿದ್ದವರನ್ನು ಹಿಡಿಯಲು ಹೋದಾಗ ಕೆಲವರು ಓಡಿ ಹೋಗಿದ್ದು, ಆ ಪೈಕಿ ವಿಟ್ಲ ಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65) ಹಾಗೂ ಹೊನ್ನಪ್ಪ (46) ಮತ್ತು ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರನ್ನು ಹಿಡಿಯಲು ಪೊಲೀಸರು ಪ್ರಯತ್ನಿಸಿದಾಗ ಆರೋಪಿಗಳಾದ ಬಾಬಣ್ಣ ಮತ್ತು ಹೊನ್ನಪ್ಪ ಹರಿಜನ ಎಂಬವರುಗಳು ಪೆÇಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿ ಪರಾರಿಯಾಗಿರುತ್ತಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ಜೂಜಾಟಕ್ಕೆ ಉಪಯೋಗಿಸಿದ 3 ಕೋಳಿಗಳು ಹಾಗೂ 1 ಸಾವಿರ ರೂಪಾಯಿ ನಗದು ಹಣ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕೋಳಿ ಅಂಕದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ : ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top