ಎಪ್ರಿಲ್ 18 ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿ - Karavali Times ಎಪ್ರಿಲ್ 18 ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿ - Karavali Times

728x90

16 April 2026

ಎಪ್ರಿಲ್ 18 ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು, ಎಪ್ರಿಲ್ 16, 2026 (ಕರಾವಳಿ ಟೈಮ್ಸ್) : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ಯ್‍ವರು ಎಪ್ರಿಲ್ 18 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. 

ಎಪ್ರಿಲ್ 18 ರಂದು ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ನಂತರ ಮಹಾತ್ಮಗಾಂಧಿ ನಗರಾಭಿವೃದ್ಧಿ 2ನೇ ಹಂತದ ಯೋಜನೆಯಡಿ ರಾಜ್ಯ ಸರ್ಕಾರದಿಂದ ಮಂಗಳೂರು ಮಹಾನಗರಪಾಲಿಕೆಯ ವಿವಿಧ ಕಾಮಗಾರಿಗಳಿಗೆ ಮಂಜೂರಾದ ಯೋಜನೆಗಳಿಗೆ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದು, ಬೆಳಿಗ್ಗೆ 9 ಗಂಟೆಗೆ ಮರವೂರು ಸೇತುವೆ ಬಳಿ, 9.45ಕ್ಕೆ ವೆಲೆನ್ಸಿಯಾ ಚರ್ಚ್ ಬಳಿ, 10.30ಕ್ಕೆ ಸುಂಕದಕಟ್ಟೆ ಉರ್ವಸ್ಟೋರ್,  ಬೆಳಿಗ್ಗೆ 10.45ಕ್ಕೆ ಚಿಲಿಂಬಿಗುಡ್ಡ, 11ಕ್ಕೆ ನಗರದ  ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಭಾ ಕಾರ್ಯಕ್ರಮ, ಮಧ್ಯಾಹ್ನ 2.30ಕ್ಕೆ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಭಾಗವಹಿಸುವರು. ರಾತ್ರಿ 10.40ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಪ್ರಿಲ್ 18 ರಂದು ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿ Rating: 5 Reviewed By: karavali Times
Scroll to Top