ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ದಸ್ತಗಿರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ಅಪರಾಧಿ ಆಂಧ್ರಪ್ರದೇಶದಲ್ಲಿ ಪೊಲೀಸ್ ಬಲೆಗೆ - Karavali Times ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ದಸ್ತಗಿರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ಅಪರಾಧಿ ಆಂಧ್ರಪ್ರದೇಶದಲ್ಲಿ ಪೊಲೀಸ್ ಬಲೆಗೆ - Karavali Times

728x90

25 April 2026

ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ದಸ್ತಗಿರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ಅಪರಾಧಿ ಆಂಧ್ರಪ್ರದೇಶದಲ್ಲಿ ಪೊಲೀಸ್ ಬಲೆಗೆ

ಮಂಗಳೂರು, ಎಪ್ರಿಲ್ 25, 2026 (ಕರಾವಳಿ ಟೈಮ್ಸ್) : 2012ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಉಚ್ಛ ನ್ಯಾಯಾಲಯದಿಂದ 10 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಕಡಬ ಪೊಲೀಸರು ಎಪ್ರಿಲ್ 25 ರಂದು ಆಂಧಪ್ರದೇಶದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

ಬಂಧಿತ ಅಪರಾಧಿಯನ್ನು ಸುಳ್ಯ ಅಜ್ಜಾವರ ನಿವಾಸಿ ಎನ್ ಎಂ ಅಬ್ದುಲ್ ಅಜೀಜ್ (30) ಎಂದು ಹೆಸರಿಸಲಾಗಿದೆ. 2012 ರ ಜನವರಿ 31 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು, ಕೊಂಬಾರು ಗ್ರಾಮದ ಅಮೈತಡ್ಕ ಎಂಬಲ್ಲಿನ ಸಾರ್ವಜನಿಕ ರಸ್ತೆಯ ಸಮೀಪ ಮೋರಿಯಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ, ಕಡಬ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 15/2012 ಕಲಂ 302, 201 ಆರ್/ಡಬ್ಲ್ಯು 34 ಐಪಿಸಿಯಂತೆ ಪ್ರಕರಣ ದಾಖಲಿಲಾಗಿತ್ತು. 

ಪ್ರಕರಣದ ತನಿಖೆ ನಡೆಸಿದ ಅಂದಿನ ತನಿಖಾಧಿಕಾರಿ ಎಎಸ್ಪಿ ಎಂ.ಎನ್ ಅನುಚೇತ್ ಅವರು, ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಾಧೀಶರಾದ ಶ್ರೀನಿವಾಸ್ ಹರೀಶ್ ಕುಮಾರ್ ಹಾಗೂ ವಿಜಯ್ ಕುಮಾರ್ ಎ ಪಾಟೀಲ್ ಅವರುಗಳು ಆರೋಪಿ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 2 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಅದೇಶಿಸಿದ್ದರು. ಸರ್ಕಾರಿ ಅಭಿಯೋಜಕರಾಗಿದ್ದ ಕೆ.ಪಿ ಯಶೋಧ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. 

ಅಪರಾಧಿಯು ಶಿಕ್ಷೆ ಪ್ರಕಟವಾದ ಬಳಿಕ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಂಡಿದ್ದಾತನನ್ನು ಕಡಬ ಪೆÇಲೀಸ್ ಠಾಣಾ ಪಿಎಸ್ಸೈ ಜಂಬುರಾಜ್ ಮಹಾಜನ್ ಮತ್ತು ಠಾಣಾ ಸಿಬ್ಬಂದಿಗಳು ಆಂದ್ರಪ್ರದೇಶದಲ್ಲಿ ದಸ್ತಗಿರಿ ಮಾಡಿ, ಎಪ್ರಿಲ್ 25 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ದಸ್ತಗಿರಿಗೆ ಸಿಗದೆ ತಲೆ ಮರೆಸಿಕೊಂಡಿದ್ದ ಅಪರಾಧಿ ಆಂಧ್ರಪ್ರದೇಶದಲ್ಲಿ ಪೊಲೀಸ್ ಬಲೆಗೆ Rating: 5 Reviewed By: karavali Times
Scroll to Top