ಪಾಣೆಮಂಗಳೂರು ಹೆದ್ದಾರಿ ಅಂಡರ್ ಪಾಸ್ ಬಳಿ ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ : ಮೂವರು ಅರೆಸ್ಟ್ - Karavali Times ಪಾಣೆಮಂಗಳೂರು ಹೆದ್ದಾರಿ ಅಂಡರ್ ಪಾಸ್ ಬಳಿ ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ : ಮೂವರು ಅರೆಸ್ಟ್ - Karavali Times

728x90

1 April 2026

ಪಾಣೆಮಂಗಳೂರು ಹೆದ್ದಾರಿ ಅಂಡರ್ ಪಾಸ್ ಬಳಿ ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ : ಮೂವರು ಅರೆಸ್ಟ್

ಬಂಟ್ವಾಳ, ಎಪ್ರಿಲ್ 01, 2026 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಕೊಂಬು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಸಮೀಪದ ಅಂಡರ್ ಪಾಸ್ ಬಳಿ ಮಾರ್ಚ್ 30 ರಂದು ರಾತ್ರಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಗಳನ್ನು ನರಿಕೊಂಬು ಗ್ರಾಮದ ನಿವಾಸಿ ಮೊಹಮ್ಮದ್ ಶಹಜ್ (21), ವಿಟ್ಲ ಕಸಬಾ ಗ್ರಾಮದ ನಿವಾಸಿ ಮುಹಮ್ಮದ್ ಆರೀಫ್ (30) ಹಾಗೂ ಬಿ ಮೂಡ ಗ್ರಾಮದ ನಿವಾಸಿ ಮೊಹಮ್ಮದ್ ಆಶಿಕ್ (21) ಎಂದು ಹೆಸರಿಸಲಾಗಿದೆ. 

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೊಲೀಸ್ ಠಾಣಾ ಪಿಎಸ್ಸೈ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 42/2026 ಕಲಂ 27(ಎ) ಎನ್ ಡಿ ಪಿ ಎಸ್ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪಾಣೆಮಂಗಳೂರು ಹೆದ್ದಾರಿ ಅಂಡರ್ ಪಾಸ್ ಬಳಿ ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ : ಮೂವರು ಅರೆಸ್ಟ್ Rating: 5 Reviewed By: karavali Times
Scroll to Top