ಬಂಟ್ವಾಳ, ಎಪ್ರಿಲ್ 06, 2026 (ಕರಾವಳಿ ಟೈಮ್ಸ್) : ಓಮ್ನಿ ಕಾರು ಡಿಕ್ಕಿ ಹೊಡೆದು ಬೈಕ್ ಸಹಸವಾರ ಗಂಭೀರ ಗಾಯಗೊಂಡ ಘಟನೆ ಪಾಣೆಮಂಗಳೂರು ಸಮೀಪದ ಮೆಲ್ಕಾರ್ ಜಂಕ್ಷನ್ನಿನಲ್ಲಿ ಎಪ್ರಿಲ್ 4 ರಂದು ಸಂಜೆ ವೇಳೆ ಸಂಭವಿಸಿದೆ.
ಗಾಯಗೊಂಡವರನ್ನು ಪ್ರಥಮ್ ಎಂದು ಹೆಸರಿಸಲಾಗಿದೆ. ಇವರು ತನ್ನ ಸ್ನೇಹಿತ ವೈಶಾಕ್ ಅವರ ಜೊತೆ ಬೈಕಿನಲ್ಲಿ ಮೆಲ್ಕಾರಿಗೆ ಬಂದಿದ್ದ ವೇಳೆ ಸಜಿಪ ಕಡೆಯಿಂದ ಸಂದೇಶ್ ಪ್ರಭು ಅವರು ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಬೈಕ್ ಸಹಸವಾರರಾಗಿದ್ದ ಪ್ರಥಮ್ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment