ಸುಳ್ಯ : ಕೆಲಸಕ್ಕೆ ಸೇರಿದ್ದ ಬಾಲಕಿಗೆ ಕಿರುಕುಳ ನೀಡಿದ ಅಂಗಡಿ ಮಾಲಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು - Karavali Times ಸುಳ್ಯ : ಕೆಲಸಕ್ಕೆ ಸೇರಿದ್ದ ಬಾಲಕಿಗೆ ಕಿರುಕುಳ ನೀಡಿದ ಅಂಗಡಿ ಮಾಲಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು - Karavali Times

728x90

10 April 2026

ಸುಳ್ಯ : ಕೆಲಸಕ್ಕೆ ಸೇರಿದ್ದ ಬಾಲಕಿಗೆ ಕಿರುಕುಳ ನೀಡಿದ ಅಂಗಡಿ ಮಾಲಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಸುಳ್ಯ, ಎಪ್ರಿಲ್ 10, 2026 (ಕರಾವಳಿ ಟೈಮ್ಸ್) : ಶಾಲಾ ರಜಾ ಸಮಯದಲ್ಲಿ ಅಂಗಡಿಯಲ್ಲಿ ಕೆಲಸಕ್ಕೆ ಸೇರಿದ್ದ ಬಾಲಕಿಗೆ ಮಾಲಿಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 

ಸಂತ್ರಸ್ಥ ಬಾಲಕಿಯು ಶಾಲಾ ರಜಾ ಸಮಯವಾದ್ದರಿಂದ ಎಪ್ರಿಲ್ 1 ರಂದು ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿರುತ್ತಾರೆ. ಮರುದಿನ ಬೆಳಿಗ್ಗೆ ಬಾಲಕಿಯು ಅಂಗಡಿಗೆ ಬಂದಾಗ ಸದ್ರಿ ಅಂಗಡಿ ಮಾಲಿಕ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಪ್ರಿಲ್ 8 ರಂದು ನೀಡಿದ ದೂರಿನಂತೆ ಈ ಬಗ್ಗೆ ಸುಳ್ಯ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 50/2026, ಕಲಂ 75 ಬಿ ಎನ್ ಎಸ್-2023 ಮತ್ತು ಕಲಂ 8,12 ಪೋಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಸುಳ್ಯ : ಕೆಲಸಕ್ಕೆ ಸೇರಿದ್ದ ಬಾಲಕಿಗೆ ಕಿರುಕುಳ ನೀಡಿದ ಅಂಗಡಿ ಮಾಲಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Rating: 5 Reviewed By: karavali Times
Scroll to Top