ಪುತ್ತೂರು ಜಾತ್ರೆ ಹಿನ್ನಲೆ : ಎ 17-18 ರಂದು ಮದ್ಯ ಮಾರಾಟ ನಿಷೇಧ, ವಾಹನ ಸಂಚಾರ ಮಾರ್ಗದಲ್ಲೂ ಬದಲಾವಣೆ ಮಾಡಿ ಡೀಸಿ ಆದೇಶ - Karavali Times ಪುತ್ತೂರು ಜಾತ್ರೆ ಹಿನ್ನಲೆ : ಎ 17-18 ರಂದು ಮದ್ಯ ಮಾರಾಟ ನಿಷೇಧ, ವಾಹನ ಸಂಚಾರ ಮಾರ್ಗದಲ್ಲೂ ಬದಲಾವಣೆ ಮಾಡಿ ಡೀಸಿ ಆದೇಶ - Karavali Times

728x90

15 April 2026

ಪುತ್ತೂರು ಜಾತ್ರೆ ಹಿನ್ನಲೆ : ಎ 17-18 ರಂದು ಮದ್ಯ ಮಾರಾಟ ನಿಷೇಧ, ವಾಹನ ಸಂಚಾರ ಮಾರ್ಗದಲ್ಲೂ ಬದಲಾವಣೆ ಮಾಡಿ ಡೀಸಿ ಆದೇಶ

ಪುತ್ತೂರು, ಎಪ್ರಿಲ್ 15, 2026 (ಕರಾವಳಿ ಟೈಮ್ಸ್) : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭೇಟಿ, ಕೆರೆ ಉತ್ಸವ, ತೆಪೆÇಪೀತ್ಸವ ಹಾಗೂ ಎಪ್ರಿಲ್ 17 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ ಕಾರ್ಯಕ್ರಮ ಮತ್ತು ಎಪ್ರಿಲ್ 18 ರಂದು ದೇವರು ಅವಭೃತ ಸ್ನಾನಕ್ಕೆ ವೀರಮಂಗಲಕ್ಕೆ ಹೋಗಲಿದ್ದು, ಈ ವೇಳೆ ಸಾವಿರಾರು ಜನ ಭಕ್ತಾದಿಗಳು ಸೇರುವ ನಿರೀಕ್ಷೆಯಿರುತ್ತದೆ. ಪುತ್ತೂರು ಪರಿಸರವು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಬರುವ ಬಾರ್ ಮತ್ತು ವೈನ್ ಶಾಪ್‍ಗಳನ್ನು ಎಪ್ರಿಲ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಎಪ್ರಿಲ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚಲು ಹಾಗೂ ಈ ಸಮಯದಲ್ಲಿ ಎಲ್ಲಾ ರೀತಿಯ ಅಮಲು ಪದಾರ್ಥಗಳ ಮಾರಾಟವನ್ನು ಮಾಡದಂತೆ ಜಿಲ್ಲಾಧಿಕಾರಿ ದರ್ಶನ್ ಎ.ವಿ ಆದೇಶಿಸಿದ್ದಾರೆ.

ಸಂಚಾರ ಮಾರ್ಗ ಬದಲಾವಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಭಂಡಾರದ ಆಗಮನದ ದಿನ ಮತ್ತು ಎಪ್ರಿಲ್ 17 ರಂದು ಬ್ರಹ್ಮರಥೋತ್ಸವ ನಡೆಯಲಿರುವುದರಿಂದ ನಿಗದಿತ ದಿನದಂದು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಪುತ್ತೂರು ನಗರ ವ್ಯಾಪ್ತಿಯಲ್ಲಿ ಸಂಜೆ 4 ಗಂಟೆಯ ನಂತರ ಸಂಚಾರ ಮಾರ್ಗ ಬದಲಾವಣೆ ಮಾಡಿ  ಜಿಲ್ಲಾಧಿಕಾರಿ  ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

ಎಪ್ರಿಲ್ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು ಬಪ್ಪಳಿಗೆಯಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟಿ ಹೋಗುವ ಸಮಯದಲ್ಲಿ 1 ಗಂಟೆಗಳ ಸುಗಮ ಸಂಚಾರಕ್ಕಾಗಿ, ಈ ಸಮಯದಲ್ಲಿ ಸಂಪ್ಯ ಕಡೆಯಿಂದ ಮಂಗಳೂರು-ಕಬಕ ಕಡೆಗೆ ಹೋಗುವ ವಾಹನಗಳು ಅಶ್ವಿನಿ ಜಂಕ್ಷನ್ ದರ್ಬೆ ಜಂಕ್ಷನ್-ಬೆದ್ರಾಳ- ಸಾಲ್ಮರ- ಪಡೀಲ್ ಮೂಲಕ ಸಂಚರಿಸಬೇಕು. ಮಂಗಳೂರು-ವಿಟ್ಲ-ಕಬಕ ಕಡೆಯಿಂದ ಬರುವ ವಾಹನಗಳು ಲಿನೆಟ್ ಜಂಕ್ಷನ್-ಬೊಳುವಾರು ಜಂಕ್ಷನ್-ಪಡೀಲ್-ಕೊಟೇಚಾ ಹಾಲ್ ಕ್ರಾಸ್-ಸಾಲ್ಮರ-ಎಪಿಎಂಸಿ -ದರ್ಬೆ-ಅಶ್ವಿನಿ ಜಂಕ್ಷನ್ ಮೂಲಕ ಸಂಚರಿಸಬೇಕು.

ಬಸ್ ಮಾರ್ಗ ಬದಲಾವಣೆ

ಬಸ್ ನಿಲ್ದಾಣದಿಂದ ಹೊರಡುವ ಎಲ್ಲಾ ಸಾರಿಗೆ ಬಸ್‍ಗಳು ಎಂ.ಟಿ ರಸ್ತೆಯ ಮೂಲಕ ತೆರಳಿ, ಮುಂದೆ ಎಡಕ್ಕೆ ತಿರುಗಿ, ಪರ್ಲಡ್ಕ ಬೈಪಾಸ್ ಮೂಲಕ ತೆರಳಬೇಕು. ಕಬಕ-ಮಂಗಳೂರು ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ ಗಳು ಲಿನೆಟ್-ಬೊಳುವಾರು-ಪಡೀಲ್-ಕೊಟೆಚಾ ಹಾಲ್ ಕ್ರಾಸ್-ಸಾಲ್ಮರ-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು. ಉಪ್ಪಿನಂಗಡಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್ಸುಗಳು ಪಡೀಲ್-ಕೊಟೆಚಾ ಹಾಲ್ ಕ್ರಾಸ್ -ಸಾಲ್ಮರ-ಎಪಿಎಂಸಿ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು. ಸುಳ್ಯ-ಸಂಪ್ಯ-ಮಡಿಕೇರಿ ಕಡೆಯಿಂದ ಬರುವ ಎಲ್ಲಾ ಸಾರಿಗೆ ಬಸ್‍ಗಳು ಅಶ್ವಿನಿ ಜಂಕ್ಷನ್-ದರ್ಬೆ-ಅರುಣಾ ಥಿಯೇಟರ್ ಮೂಲಕ ಬಸ್ ನಿಲ್ದಾಣಕ್ಕೆ ಸಂಚರಿಸಬೇಕು.

ಆಟೋ ರಿಕ್ಷಾ ಸಂಚರಿಸುವ ಮಾರ್ಗದ ವಿವರ

ನೆಹರೂನಗರ-ಬೊಳುವಾರು ಕಡೆಯಿಂದ ಬರುವ ಆಟೋ ರಿಕ್ಷಾಗಳು ಮಯೂರ ಇನ್ ಲ್ಯಾಂಡ್ ಬಳಿ ಪ್ರಯಾಣಿಕರನ್ನು ಇಳಿಸಿ, ಉಲಾರ್‍ಂಡಿ ಕ್ರಾಸ್ ಮೂಲಕ ವಾಪಸ್ಸು ಸಂಚರಿಸಬೇಕು. ದರ್ಬೆ ಕಡೆಯಿಂದ ಬರುವ ಅಟೋ ರಿಕ್ಷಾಗಳು ಎಪಿಎಂಸಿ ರಸ್ತೆಯ ಮುಖಾಂತರ ನೆಲ್ಲಿಕಟ್ಟೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದಿಂದ ಗಾಂಧಿಕಟ್ಟೆ ಕಡೆಗೆ ಬಂದು ಪ್ರಯಾಣಿಕರನ್ನು ಇಳಿಸಿ, ವಾಪಸ್ಸು ಮುಖ್ಯ ರಸ್ತೆಯಾಗಿ ದರ್ಬೆ ಕಡೆಗೆ ಸಂಚರಿಸಬೇಕು. ಪರ್ಲಡ್ಕ-ಬಪ್ಪಳಿಗೆ ಕಡೆಯಿಂದ ಬರುವ ಆಟೋ ರಿಕ್ಷಾಗಳು ಕಿಲ್ಲೆ ಮೈದಾನದ ಬಳಿ ಪ್ರಯಾಣಿಕರನ್ನು ಇಳಿಸಿ, ವಾಪಾಸು ಸಂಚರಿಸಬೇಕು. 

ಭಕ್ತಾದಿಗಳ ವಾಹನಗಳ ಪಾಕಿರ್‍ಂಗ್ ಸ್ಥಳದ ವಿವರ

ಉಪ್ಪಿನಂಗಡಿ, ಕೋಡಿಂಬಾಡಿ, ಬನ್ನೂರು  ಮಾರ್ಗದಿಂದ ಬರುವ ವಾಹನಗಳನ್ನು ಎಪಿಎಂಸಿ ಆವರಣ, ಕೊಂಬೆಟ್ಟು ಬೋರ್ಡ್ ಹೈಸ್ಕೂಲ್ ಮೈದಾನ, ಬಂಟರ ಭವನ, ನೆಲ್ಲಿಕಟ್ಟೆ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು.

ಸಂಪ್ಯ, ಸುಳ್ಯ, ಬೆಟ್ಟಂಪಾಡಿ, ಪಾಣಾಜೆ, ಪರ್ಲಡ್ಡ, ಪುರುಷರಕಟ್ಟೆ ಮಾರ್ಗದಿಂದ ಬರುವ ವಾಹನಗಳನ್ನು ತೆಂಕಿಲ ಗೌಡ ಸಮುದಾಯ ಭವನ, ತೆಂಕಿಲ ವಿವೇಕಾನಂದ ಶಾಲಾ ಮೈದಾನ, ಕಿಲ್ಲೆ ಮೈದಾನ, ತೆಂಕಿಲ ಗೌಡ ಸಮುದಾಯ ಭವನದ ಎದುರುಗಡೆ ಇರುವ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಬೇಕು.

ವಿಟ್ಲ, ಕಬಕ, ನೆಹರೂನಗರ ಮಾರ್ಗದಿಂದ ಬರುವ ವಾಹನಗಳನ್ನು ಜೈನ ಭವನದ ಪಾರ್ಕಿಂಗ್ ಜಾಗ, ಅಸ್ಮಿ ಲಾಡ್ಜ್ ಬಳಿ ಇರುವ ಖಾಲಿ ಜಾಗ, ತೆಂಕಿಲ ದರ್ಶನ್ ಹಾಲ್ ಪಕ್ಕದ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಬೇಕು ಎಂದು ಜಿಲ್ಲಾಧಿಕಾರಿ  ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು ಜಾತ್ರೆ ಹಿನ್ನಲೆ : ಎ 17-18 ರಂದು ಮದ್ಯ ಮಾರಾಟ ನಿಷೇಧ, ವಾಹನ ಸಂಚಾರ ಮಾರ್ಗದಲ್ಲೂ ಬದಲಾವಣೆ ಮಾಡಿ ಡೀಸಿ ಆದೇಶ Rating: 5 Reviewed By: karavali Times
Scroll to Top