ಬೆಂಗಳೂರು, ಎಪ್ರಿಲ್ 29, 2026 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಿದೆ. ಇಂದು (ಎಪ್ರಿಲ್ 29) ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದೆ. ಎಪ್ರಿಲ್ 30 ರಂದು 24 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಮೇ 1 ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಿಗೆ ಒಟ್ಟು 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 2ರಂದು ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಈ ಸಮಯದಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಕೆಲವೆಡೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.











0 comments:
Post a Comment