ತಾಪಮಾನ ಹೆಚ್ಚಳ : ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಕಾರ್ಮಿಕ ಇಲಾಖೆ ಸೂಚನೆ - Karavali Times ತಾಪಮಾನ ಹೆಚ್ಚಳ : ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಕಾರ್ಮಿಕ ಇಲಾಖೆ ಸೂಚನೆ - Karavali Times

728x90

30 April 2026

ತಾಪಮಾನ ಹೆಚ್ಚಳ : ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಕಾರ್ಮಿಕ ಇಲಾಖೆ ಸೂಚನೆ

ಮಂಗಳೂರು, ಮೇ 01, 2026 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ ಮಾಲೀಕರ ಜವಾಬ್ದಾರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಇಲಾಖೆ ತಿಳಿಸಿದೆ. 

ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡುವುದು ಹಾಗೂ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸುವುದು ಗುತ್ತಿಗೆದಾರರು/ ಮಾಲೀಕರ ಜವಾಬ್ದಾರಿಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಿದೆ. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು/ ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆಂದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 



  • Blogger Comments
  • Facebook Comments

0 comments:

Post a Comment

Item Reviewed: ತಾಪಮಾನ ಹೆಚ್ಚಳ : ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಕಾರ್ಮಿಕ ಇಲಾಖೆ ಸೂಚನೆ Rating: 5 Reviewed By: karavali Times
Scroll to Top