ಎಪ್ರಿಲ್ 23 ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ಮಧು ಬಂಗಾರಪ್ಪ - Karavali Times ಎಪ್ರಿಲ್ 23 ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ಮಧು ಬಂಗಾರಪ್ಪ - Karavali Times

728x90

22 April 2026

ಎಪ್ರಿಲ್ 23 ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ಮಧು ಬಂಗಾರಪ್ಪ

ಬೆಂಗಳೂರು, ಎಪ್ರಿಲ್ 22, 2026 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಫಲಿತಾಂಶ ಎಪ್ರಿಲ್ 23 ರಂದು ಗುರುವಾರ (ನಾಳೆ) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಗುರುವಾರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಇಲಾಖಾ ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ನೋಡಬಹುದು. ಅಲ್ಲದೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲಿಗೆ ಎಸ್ ಎಂ ಎಸ್ ಮೂಲಕವೂ ಫಲಿತಾಂಶ ರವಾನೆಯಾಗಲಿದೆ. ಕೋರ್ಟ್ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಎಪ್ರಿಲ್ 23 ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ಮಧು ಬಂಗಾರಪ್ಪ Rating: 5 Reviewed By: karavali Times
Scroll to Top