ಅವಿಭಜಿತ ದ.ಕ. ಜಿಲ್ಲೆ ಶೈಕ್ಷಣಿಕ ಗುಣಮಟ್ಟದಲ್ಲಿ ರಾಜಿ ಮಾಡಿಕೊಂಡಿಲ್ಲ : ಹ್ಯಾಟ್ಸಪ್ ಎಂದ ಸ್ಪೀಕರ್ ಡಾ ಖಾದರ್
ಜಿಲ್ಲೆಯ ವಿದ್ಯಾರ್ಥಿಗಳು, ಶಿಕ್ಷಕರು ಪರಿಶ್ರಮಕ್ಕೆ ಹೆಸರುವಾಸಿ : ಗುಂಡೂರಾವ್ ಶ್ಲಾಘನೆ
ಮಂಗಳೂರು, ಎಪ್ರಿಲ್ 23, 2026 (ಕರಾವಳಿ ಟೈಮ್ಸ್) : ಈ ವರ್ಷದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರನ್ನು ಕರ್ನಾಟಕ ವಿಧಾನಸಭೆ ಸ್ಪೀಕರ್ ಡಾ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿನಂದಿಸಿದ್ದಾರೆ.
ಶೈಕ್ಷಣಿಕವಾಗಿ ಸದಾ ಘನತೆ, ಗೌರವವನ್ನು ಹೊಂದಿರುವ ಅವಿಭಜಿತ ದಕ್ಷಿಣ ಜಿಲ್ಲೆಯು ಶೈಕ್ಷಣಿಕ ಗುಣ ಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವುದಿಲ್ಲ. ಈ ಹಿರಿಮೆ ಜಿಲ್ಲೆಯ ಶೈಕ್ಷಣಿಕ ಉತ್ತುಂಗಕ್ಕೆ ಕಾರಣವಾಗಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು, ಶಿಕ್ಷಕರು ಪರಿಶ್ರಮಕ್ಕೆ ಸದಾ ಹೆಸರುವಾಸಿಯಾಗಿದ್ದು, ಫಲಿತಾಂಶವು ಅದರ ಪ್ರತಿಫಲವಾಗಿದೆ. ಜಿಲ್ಲೆಯ ಶೈಕ್ಷಣಿಕ ಹಿರಿಮೆಯು ಉನ್ನತ ಮಟ್ಟದಲ್ಲಿ ಮುಂದುವರಿದಿರುವುದು ಶ್ಲಾಘನೀಯ ಎಂದು ಅಭಿನಂದಿಸಿದ್ದಾರೆ.












0 comments:
Post a Comment