ಬಂಟ್ವಾಳ, ಎಪ್ರಿಲ್ 06, 2026 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಕಳವಾಗಿರುವ ದ್ವಿಚಕ್ರ ವಾಹನ ಸಹಿತ ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಸಜಿಪಮುನ್ನೂರು ಗ್ರಾಮದ ನಿವಾಸಿ ಹಸನ್ ಬಾವಾ (55) ಹಾಗೂ ಬಿ ಮೂಡ ಗ್ರಾಮದ ನಿವಾಸಿ ಮೊಹಮ್ಮದ್ ಇರ್ಶಾದ್ (37) ಎಂದು ಹೆಸರಿಸಲಾಗಿದೆ.
ಮಾರ್ಚ್ 21 ರಂದು ಪರ್ಲಿಯಾ ಎಂಬಲ್ಲಿನ ವಸತಿ ಗೃಹದ ಶೆಡ್ಡಿನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ ಸ್ಕೂಟರ್ ಮೌಲ್ಯ 50 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.












0 comments:
Post a Comment