ಸುಳ್ಯ, ಎಪ್ರಿಲ್ 07, 2026 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣ ಬೇಧಿಸಿರುವ ಪೊಲೀಸರು ಆಂಧಪ್ರದೇಶ ಮೂಲದ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಆಂದ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಂದು ಹೆಸರಿಸಲಾಗಿದೆ. ಮಾರ್ಚ್ 30 ರಂದು ಮಸೀದಿ ಕಾಣಿಕೆ ಡಬ್ಬಿ ಕಳವು ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಎಪ್ರಿಲ್ 6 ರಂದು ಸುಳ್ಯ ಕೆಮ್ರಾಜೆ ಎಲಿಮಲೆ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತನಿಂದ ಕಳವು ಮಾಡಿದ 2 ಸಾವಿರ ರೂಪಾಯಿ ನಗದು ಹಣವನ್ನು ಸ್ವಾದೀನಪಡಿಸಿಕೊಳ್ಳಲಾಗಿದೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


















0 comments:
Post a Comment