ನರಿಕೊಂಬು : ಮದರಂಗಿ ಕಾರ್ಯಕ್ರಮದ ಎಂಸಿ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು - Karavali Times ನರಿಕೊಂಬು : ಮದರಂಗಿ ಕಾರ್ಯಕ್ರಮದ ಎಂಸಿ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು - Karavali Times

728x90

11 April 2026

ನರಿಕೊಂಬು : ಮದರಂಗಿ ಕಾರ್ಯಕ್ರಮದ ಎಂಸಿ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು

ಬಂಟ್ವಾಳ, ಎಪ್ರಿಲ್ 11, 2026 (ಕರಾವಳಿ ಟೈಮ್ಸ್) : ತಾಲೂಕಿನ ನರಿಕೊಂಬು ಗ್ರಾಮದ ನಾಯಿಲದಲ್ಲಿ ಸಂಬಂಧಿಕರ ಮನೆಯ ಮದರಂಗಿ ಕಾರ್ಯಕ್ರಮದಲ್ಲಿ ಎಂ ಸಿ ಮಾಡುತ್ತಿದ್ದ ಯುವಕನೋರ್ವ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. 

ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಬ್ಬೆಟ್ಟು ನಿವಾಸಿ ಅಶ್ವಿಥ್ (32) ಎಂದು ಹೆಸರಿಸಲಾಗಿದೆ. ನರಿಕೊಂಬು ಗ್ರಾಮದ ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಅಶ್ವಿಥ್ ಹಠಾತ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಆತ ಮೃತಪಟ್ಟಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ನರಿಕೊಂಬು : ಮದರಂಗಿ ಕಾರ್ಯಕ್ರಮದ ಎಂಸಿ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತ್ಯು Rating: 5 Reviewed By: karavali Times
Scroll to Top