ಅಸಂಘಟಿತ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆಯಲು ಮಂಡಳಿ ವೆಬ್ ಸೈಟ್ ಮೂಲಕ ನೋಂದಾಯಿಸಲು ಸೂಚನೆ - Karavali Times ಅಸಂಘಟಿತ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆಯಲು ಮಂಡಳಿ ವೆಬ್ ಸೈಟ್ ಮೂಲಕ ನೋಂದಾಯಿಸಲು ಸೂಚನೆ - Karavali Times

728x90

4 April 2026

ಅಸಂಘಟಿತ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆಯಲು ಮಂಡಳಿ ವೆಬ್ ಸೈಟ್ ಮೂಲಕ ನೋಂದಾಯಿಸಲು ಸೂಚನೆ

ಮಂಗಳೂರು, ಎಪ್ರಿಲ್ 04, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸುತ್ತಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 18 ರಿಂದ 60 ವರ್ಷದೊಳಗಿನ 101 ವರ್ಗಗಳ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ 18 ರಿಂದ 60 ವರ್ಷದೊಳಗಿನ ಖಾಸಗಿ ವಾಣಿಜ್ಯ ವಾಹನ ಚಾಲಕರು, ನಿರ್ವಾಹಕರು, ಕ್ಲೀನರ್, ಗ್ಯಾರೇಜ್ ಕಾರ್ಮಿಕರು ಹಾಗೂ ಮೋಟಾರು ಸಾರಿಗೆಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುವ ಇನ್ನಿತರ ಕಾರ್ಮಿಕರನ್ನು ಮಂಡಳಿ ವೆಬ್‍ಸೈಟ್ ತಿತಿತಿ.ಞsuತಿssb.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಆನ್ ಲೈನ್ ಮೂಲಕ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಅಥವಾ ಕಾರ್ಮಿಕ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಕಛೇರಿಗಳಲ್ಲಿ ನೋಂದಾಯಿಸಿಕೊಳ್ಳಬಹುದು. 

ಫಲಾನುಭವಿಗಳು ಉಚಿತವಾಗಿ ನೋಂದಾಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಗಳನ್ನು ಪಡೆಯಬಹುದಾಗಿದೆ. ಯಾವುದೇ ಹೆಚ್ಚಿನ ಶುಲ್ಕ ಭರಿಸುವ ಅವಶ್ಯಕತೆ ಇರುವುದಿಲ್ಲ. ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರಿಗೆ 50 ರೂಪಾಯಿ ಮೂರು ವರ್ಷಗಳ ಅವಧಿಗೆ ನೋಂದಾಣಿ ಶುಲ್ಕ ಪಾವತಿಸಬೇಕಾಗಿರುತ್ತದೆ.

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ದೊರಕುವ ಸೌಲಭ್ಯಗಳು :  ಅಪಘಾತ ಪರಿಹಾರ ಸೌಲಭ್ಯ, ಮರಣ 1 ಲಕ್ಷದವರೆಗೆ, ಸಹಜ ಮರಣ 10 ಸಾವಿರ ರೂಪಾಯಿವರೆಗೆ, ಆಸ್ಪತ್ರೆ ವೆಚ್ಚ (ಅಪಘಾತ ಪ್ರಕರಣಗಳಲ್ಲಿ) 50 ಸಾವಿರ ರೂಪಾಯಿವರೆಗೆ

ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಯೋಜನೆಯಡಿ ದೊರಕುವ ಸೌಲಭ್ಯಗಳು : ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್ ಗಳು ಮರಣ ಹೊಂದಿದಲ್ಲಿ ಅವರ ನಾಮಿನಿಗಳಿಗೆ 5 ಲಕ್ಷ ರೂಪಾಯಿ ಪರಿಹಾರ, ಸಹಜ ಮರಣ ಪರಿಹಾರ, ಅಂತ್ಯ ಸಂಸ್ಕಾರ ವೆಚ್ಚ 25 ಸಾವಿರ ರೂಪಾಯಿ, ಶಾಶ್ವತ ದುರ್ಬಲತೆಗೆ 2 ಲಕ್ಷದವರೆಗೆ ಪರಿಹಾರ, ತಾತ್ಕಾಲಿಕ ದುರ್ಬಲತೆಗೆ 1 ಲಕ್ಷದವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ, ಶೈಕ್ಷಣಿಕ ಧನಸಹಾಯ, ಅಪಘಾತದ ಕಾರಣ ನಿಧನರಾದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಾಂಗದವರೆಗೆ ವಾರ್ಷಿಕ 10 ಸಾವಿರ ರೂಪಾಯಿಗಳ ಶೈಕ್ಷಣಿಕ ಧನಸಹಾಯ, ನೋಂದಾಯಿತ ಫಲಾನುಭವಿಯ ಗರಿಷ್ಠ ಇಬ್ಬರು ಮಕ್ಕಳಿಗೆ 12ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಶೈಕ್ಷಣಿಕ ಧನಸಹಾಯ.

ನೋಂದಣಿ ಮತ್ತು ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಗರದ ಯೆಯ್ಯಾಡಿ ಕಾರ್ಮಿಕ ಭವನದ ಕಾರ್ಮಿಕ ಅಧಿಕಾರಿಯವರ ಕಛೇರಿ ದೂರವಾಣಿ ಸಂಖ್ಯೆ 08242437479 ಅಥವಾ ಆಯಾ ತಾಲೂಕುಗಳ ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಅಸಂಘಟಿತ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆಯಲು ಮಂಡಳಿ ವೆಬ್ ಸೈಟ್ ಮೂಲಕ ನೋಂದಾಯಿಸಲು ಸೂಚನೆ Rating: 5 Reviewed By: karavali Times
Scroll to Top