7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿದ ಪುತ್ತೂರು ಪೊಲೀಸರು - Karavali Times 7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿದ ಪುತ್ತೂರು ಪೊಲೀಸರು - Karavali Times

728x90

25 April 2026

7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು, ಎಪ್ರಿಲ್ 26, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 68/2018 ಕಲಂ 399, 402 ಐಪಿಸಿ ಮತ್ತು ಕಲಂ 25 ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ, ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಬಿಹಾರ ಬೇಗುಸಾರೈ ನಿವಾಸಿ ಟುಣ್ ಟುಣ್ ಕುಮಾರ್ (31) ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಿಹಾರದಲ್ಲಿ ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. 

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಮಧು ಕೆ ಎನ್, ಅಸ್ತಮ್ ಆರ್, ನಾಗೇಶ ಕೆ ಸಿ ಅವರುಗಳ ತಂಡ ಆರೋಪಿ ದಸ್ತಗಿರಿ ಕಾರ್ಯಾಚರಣೆ ನಡೆಸಿದ್ದು, ಎಪ್ರಿಲ್ 25 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: 7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿದ ಪುತ್ತೂರು ಪೊಲೀಸರು Rating: 5 Reviewed By: karavali Times
Scroll to Top