ಪುತ್ತೂರು, ಎಪ್ರಿಲ್ 23, 2026 (ಕರಾವಳಿ ಟೈಮ್ಸ್) : ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ವಿದ್ಯಾರ್ಥಿಗೆ ಏಳು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ಎಪ್ರಿಲ್ 22 ರಂದು ಸಂಜೆ ನಡೆದಿದೆ.
ಬೆಳ್ತಂಗಡಿ ನಿವಾಸಿ, ಪುತ್ತೂರು ಖಾಸಗಿ ಕಾಲೇಜು ವಿದ್ಯಾರ್ಥಿ ಆದಿಲ್ ಹುಸೈನ್ (21) ಎಂಬಾತನಿಗೆ ಆರೋಪಿಗಳಾದ ಪರಿಚಯದ ಬಿ ಕೆ ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಮಂದಿ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.
ಎಪ್ರಿಲ್ 22 ರಂದು ಸಂಜೆ ಆದಿಲ್ ಹುಸೈನ್ ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝರ್ ಎಂಬವರೊಂದಿಗೆ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿರುವ ವೇಳೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದಾರೆ. ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ವಿದ್ಯಾರ್ಥಿಗೆ ಅವ್ಯಾಚವಾಗಿ ಬೈದು, ಜೀವಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ಆದಿಲ್ ಹುಸೈನ್ ಅವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೆಲವು ತಿಂಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಆದಿಲ್ ಹುಸೈನ್ ಬಿಡಿಸಿದ್ದು, ಇದೇ ಕಾರಣಕ್ಕಾಗಿ ಆರೋಪಿಗಳು ತನ್ನ ಮೆಲೆ ಹಲ್ಲೆ ನಡೆಸಿರುತ್ತಾರೆ ಎಂದು ಆದಿಲ್ ಹುಸೈನ್ ನೀಡಿದ ದೂರಿನಂತೆ ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment