ಕಡಬ, ಎಪ್ರಿಲ್ 04, 2026 (ಕರಾವಳಿ ಟೈಮ್ಸ್) : ಅಕ್ರಮ ಹಾಗೂ ಹಿಂಸಾತ್ಮಕವಾಗಿ ಲಾರಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣ ಬೇಧಿಸಿದ ಕಡಬ ಠಾಣಾ ಪೊಲೀಸರು ಲಾರಿ ಚಾಲಕ ಸಹಿತ ಬರೋಬ್ಬರು 20 ಜಾನುವಾರುಗಳನ್ನು ವಶಪಡಿಸಿಕೊಂಡ ಘಟನೆ ನೂಜಿ ಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ ಎಪ್ರಿಲ್ 3 ರಂದು ನಡೆದಿದೆ.
ಶುಕ್ರವಾರ ಮುಂಜಾನೆ ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಒಂದು ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದಾಗಿ ಖಚಿತ ಮಾಹಿತಿ ದೊರೆತ ಮೇರೆಗೆ ಕಡಬ ಪೊಲೀಸ್ ಠಾಣಾ ಪಿಎಸ್ಸೈ ಜಂಬುರಾಜ್ ಮಹಾಜನ್ ನೇತೃತ್ವದ ಪೊಲೀಸರು ನೂಜಿ ಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ ಕೆಎ11 ಬಿ9413 ನೋಂದಣಿ ಸಂಖ್ಯೆಯ ಕಂಟೇನರ್ ಲಾರಿಯನ್ನು ಪರಿಶೀಲಿಸಿದಾಗ ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿದೆ.
ಲಾರಿಯಲ್ಲಿದ್ದಾತನಲ್ಲಿ ವಿಚಾರಿಸಿದಾಗ ಹಾಸನ ಬೇಲೂರು ನಿವಾಸಿ ಇರ್ಫಾನ್ (26) ಎಂದು ಗೊತ್ತಾಗಿದೆ. ಸದ್ರಿ ಜಾನುವಾರುಗಳನ್ನು ಸಾಗಾಟ ಮಾಡಲು ಯಾವುದೇ ಪರವಾನಿಗೆ ಇರುವುದಿಲ್ಲ ಹಾಗೂ ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾನೆ. ಸದ್ರಿ ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











0 comments:
Post a Comment