ಬಂಟ್ವಾಳ, ಮೇ 14, 2026 (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ಬರೋಬ್ಬರಿ 26 ವರ್ಷಗಳ ಬಳಿಕ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಕಳೆದ 25 ವರ್ಷಗಳಿಂದ ಬ್ಯಾರಿ ಭಾಷೆ, ಸಂಸ್ಕøತಿ, ಸಾಹಿತ್ಯದಲ್ಲಿ ಬಹಳಷ್ಟು ಬದಲಾವಣೆ ಅಭಿವೃದ್ದಿಯಾಗಿದೆ ಎಂದು ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಹೇಳಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಸಹಯೋಗದಲ್ಲಿ ಪಾಣೆಮಂಗಳೂರಿನ ಆಲಡ್ಕದ ಎಸ್ ಎಸ್ ಆಡಿಟೋರಿಯಂ ಇಲ್ಲಿನ ಮರ್ ಹೂಂ ಫಾರೂಕ್ ಗೂಡಿನಬಳಿ ದ್ವಾರ, ಮರ್ ಹೂಂ ಮಹಮ್ಮದ್ ಮಾರಿಪಳ್ಳ ಸಭಾಂಗಣ, ಮರ್ ಹೂಂ ಹಾಜಿ ಜಿ ಅಬ್ದುಲ್ ಖಾದರ್ ವೇದಿಕೆಯಲ್ಲಿ ಮೇ 12 ರಂದು ನಡೆದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬ್ಯಾರಿ ಭಾಷೆಯಲ್ಲಿ ಸಾಹಿತ್ಯ ಕೃಷಿ ಹೇರಳವಾಗಿದೆ. ನೂರಾರು ಸಂಖ್ಯೆಯಲ್ಲಿ ಯುವ ಸಮೂಹ ಬ್ಯಾರಿ ಭಾಷೆಯ ಸಾಂಸ್ಕøತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಅಭಿಮಾನದ ಸಂಗತಿಯಾಗಿದೆ. ಬ್ಯಾರಿ ಭಾಷೆಯಲ್ಲಿ ಸಾಕಷ್ಟು ಪುಸ್ತಕಗಳು ಪ್ರಕಟಗೊಂಡಿದೆ. ಹಾಡುಗಾರಿಕೆ, ನಾಟಕ ನಿರ್ದೇಶನ, ರಚನೆ ಹಾಗೂ ಪ್ರದರ್ಶನಗೊಂಡಿದೆ. ಮುಂದಿನ ದಿನಗಳಲ್ಲಿ ಬ್ಯಾರಿ ಭಾಷಾ ಬೆಳವಣಿಗೆ ಹಿನ್ನಲೆಯಲ್ಲಿ ಕೃಷಿ ಮಾಡುತ್ತಿರುವ ಎಲ್ಲರಿಗೂ ಅಕಾಡೆಮಿ ಸೂಕ್ತ ಮನ್ನಣೆ ನೀಡಬೇಕು ಎಂದು ಆಗ್ರಹಿಸಿದರು.










0 comments:
Post a Comment