ಬಂಟ್ವಾಳ, ಮೇ 10, 2026 (ಕರಾವಳಿ ಟೈಮ್ಸ್) : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು-ಆಲಡ್ಕ ಎಸ್ ಎಸ್ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಗಣ್ಯ ಅತಿಥಿಗಳಿಗೆ ಸಂಘಟಕರು ಆಹ್ವಾನ ನೀಡಿದರು.
ಸಮ್ಮೇಳನದ ಸರ್ವಾಧ್ಯಕ್ಷ ರಹೀಂ ಬಿ ಸಿ ರೋಡು, ವಿಧಾನಸಭಾ ಸ್ಪೀಕರ್ ಡಾ ಯು ಟಿ ಖಾದರ್ ಫರೀದ್, ಶಾಸಕ ಯು ರಾಜೇಶ್ ನಾಯಕ್, ಮಾಜಿ ಸಚಿವ ಬಿ ರಮಾನಾಥ ರೈ, ಗೇರು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ ಎಚ್ ಖಾದರ್, ಜಿ ಪಂ ಮಾಜಿ ಉಪಾಧ್ಯಕ್ಷ ಎಂ ಎಸ್ ಮುಹಮ್ಮದ್, ತುಂಬೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ ಅಬ್ದುಲ್ ಸಲಾಂ, ಜನಪ್ರಿಯ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ ಅಬ್ದುಲ್ ಬಶೀರ್ ವಿ ಕೆ, ಬೆಳಗಾವಿ ವಿಟಿಯು ಸೆನೆಟ್ ಸದಸ್ಯ ಡಾ ಮುಸ್ತಪಾ ಬಸ್ತಿಕೋಡಿ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಝ್ ಎಚ್ ಐ, ಎ ಜೆ ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯೆ ಡಾ ಹಸೀನಾ ಪೆÇನ್ನೋಡಿ, ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಹಾಜಿ ಜಿ ಎ ಬಾವಾ, ಪೂನಾದ ಡಾ ಡಿ ವೈ ಪಾಟೀಲ್ ವಿವಿ ಕುಲಸಚಿವ ಡಾ ಬಿ ಎಂ ಬೀರಾನ್ ಮೊಹಿದಿನ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಜಿ ಎ ಉಸ್ಮಾನ್ ಕರೋಪಾಡಿ, ಹಿರಿಯ ಪತ್ರಕರ್ತ ಇಬ್ರಾಹಿಂ ಅಡ್ಕಸಳ ಮೊದಲಾದವರಿಗೆ ವಿವಿಧ ಪದಾಧಿಕಾರಿಗಳು ಆಹ್ವಾನ ನೀಡಿದರು.



















0 comments:
Post a Comment