ಆಂಧ್ರ ಪ್ರದೇಶ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಪಡೀಲ್ ಪ್ರಜಾಸೌಧಕ್ಕೆ ಭೇಟಿ - Karavali Times ಆಂಧ್ರ ಪ್ರದೇಶ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಪಡೀಲ್ ಪ್ರಜಾಸೌಧಕ್ಕೆ ಭೇಟಿ - Karavali Times

728x90

8 May 2026

ಆಂಧ್ರ ಪ್ರದೇಶ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಪಡೀಲ್ ಪ್ರಜಾಸೌಧಕ್ಕೆ ಭೇಟಿ

ಮಂಗಳೂರು, ಮೇ 08, 2026 (ಕರಾವಳಿ ಟೈಮ್ಸ್) : ಆಂಧ್ರ ಪ್ರದೇಶದ  ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್   ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ) ಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಅವರು ರಾಜ್ಯಪಾಲರನ್ನು ಸ್ವಾಗತಿಸಿದರು.

ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು  ಹೊಸ ಕಚೇರಿಯ ನಿರ್ಮಾಣ ಹಾಗೂ ಶೈಲಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕೊಠಡಿಯಲ್ಲಿದ್ದ ಜಿಲ್ಲೆಯಲ್ಲಿ ಆಡಳಿತ ನಡೆಸಿದ ಜಿಲ್ಲಾಧಿಕಾರಿಗಳ ಪಟ್ಟಿಯನ್ನು ಅವರು ವೀಕ್ಷಿಸಿದರು.

ಜಿಲ್ಲಾಧಿಕಾರಿಗಳು ರಾಜ್ಯಪಾಲರಿಗೆ ಯಕ್ಷಗಾನ ಶೈಲಿಯ ಸ್ಮರಣಿಕೆ ನೀಡಿ ಗೌರವಿಸಿದರು. ಆಂಧ್ರಪ್ರದೇಶದ ರಾಜ್ಯಪಾಲರ ಭೇಟಿ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಈ ಸಂದರ್ಭ ಅಪರ ಜಿಲ್ಲಾಧಿಕಾರಿ ರಾಜು ಕೆ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಆಂಧ್ರ ಪ್ರದೇಶ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್ ಪಡೀಲ್ ಪ್ರಜಾಸೌಧಕ್ಕೆ ಭೇಟಿ Rating: 5 Reviewed By: karavali Times
Scroll to Top