ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳಿಗೆ ನಿರಂತರ ಒತ್ತಡ ಸಲ್ಲದು : ಅಬ್ಬಾಸ್ ಅಲಿ - Karavali Times ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳಿಗೆ ನಿರಂತರ ಒತ್ತಡ ಸಲ್ಲದು : ಅಬ್ಬಾಸ್ ಅಲಿ - Karavali Times

728x90

14 May 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳಿಗೆ ನಿರಂತರ ಒತ್ತಡ ಸಲ್ಲದು : ಅಬ್ಬಾಸ್ ಅಲಿ

ಬಂಟ್ವಾಳ, ಮೇ 14, 2026 (ಕರಾವಳಿ ಟೈಮ್ಸ್) : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ವ್ಯವಸ್ಥೆಯ ನಿರ್ಲಕ್ಷ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ನಿರಂತರ ಒತ್ತಡ ಉಂಟಾಗಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಹೇಳಿದರು. 

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪತ್ರಿಕೆಗೆ ಪ್ರತಿಕ್ರಯಿಸಿದ ಅವರು, ಪರೀಕ್ಷಾ ವ್ಯವಸ್ಥೆ ಸಂಪೂರ್ಣ ಪಾರದರ್ಶಕ ಮತ್ತು ಭದ್ರತೆಯಿಂದ ಕೂಡಿರಬೇಕು. ವಿದ್ಯಾರ್ಥಿಗಳ ಕನಸುಗಳ ಜೊತೆ ಚೆಲ್ಲಾಟವಾಡುವ ಯಾವುದೇ ಅಕ್ರಮಗಳನ್ನು ಸರಕಾರ ಸಹಿಸಬಾರದು. ನೀಟ್ ನಲ್ಲಿ ನಡೆದ ಅಕ್ರಮಗಳಿಗೆ ಕಟ್ಟುನಿಟ್ಟಿನ ಕ್ರಮ ಅತೀ ಅಗತ್ಯ ಎಂದರು. 

ವಿದ್ಯಾರ್ಥಿಗಳ ಭವಿಷ್ಯ ಕಾಪಾಡುವುದು ಸರಕಾರದ ಜವಾಬ್ದಾರಿಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕೇಂದ್ರ ಸರಕಾರ ತೀವ್ರ ನಿಗಾ ವಹಿಸಬೇಕು ಎಂದವರು ಹೇಳಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ವಿದ್ಯಾರ್ಥಿಗಳಿಗೆ ನಿರಂತರ ಒತ್ತಡ ಸಲ್ಲದು : ಅಬ್ಬಾಸ್ ಅಲಿ Rating: 5 Reviewed By: karavali Times
Scroll to Top