ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸ್ಪೀಕರ್ ಡಾ. ಯು.ಟಿ. ಖಾದರ್ - Karavali Times ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸ್ಪೀಕರ್ ಡಾ. ಯು.ಟಿ. ಖಾದರ್ - Karavali Times

728x90

7 May 2026

ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸ್ಪೀಕರ್ ಡಾ. ಯು.ಟಿ. ಖಾದರ್

ಬಂಟ್ವಾಳ, ಮೇ 07, 2026 (ಕರಾವಳಿ ಟೈಮ್ಸ್) : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಆಲಡ್ಕದ ಎಸ್. ಎಸ್ ಆಡಿಟೋರಿಯಂನಲ್ಲಿ ನಡೆಯುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಡಾ ಯು ಟಿ ಖಾದರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು ಎಚ್, ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಉಪಾಧ್ಯಕ್ಷ ಯು ಮುಸ್ತಫಾ, ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ, ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹನೀಫ್, ಪ್ರಧಾನ ಕಾರ್ಯದರ್ಶಿ ಪಿ ಎಂ ಅಶ್ರಫ್ ಪಾಣೆಮಂಗಳೂರು ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸ್ಪೀಕರ್ ಡಾ. ಯು.ಟಿ. ಖಾದರ್ Rating: 5 Reviewed By: karavali Times
Scroll to Top