ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸಂಘಟಕರಿಂದ ಅಧಿಕೃತ ಆಹ್ವಾನ - Karavali Times ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸಂಘಟಕರಿಂದ ಅಧಿಕೃತ ಆಹ್ವಾನ - Karavali Times

728x90

8 May 2026

ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸಂಘಟಕರಿಂದ ಅಧಿಕೃತ ಆಹ್ವಾನ

ಬಂಟ್ವಾಳ, ಮೇ 07, 2026 (ಕರಾವಳಿ ಟೈಮ್ಸ್) : ಪಾಣೆಮಂಗಳೂರು-ಆಲಡ್ಕದ ಎಸ್ ಎಸ್ ಆಡಿಟೋರಿಯಂನಲ್ಲಿ ಮೇ 12 ರಂದು ಮಂಗಳವಾರ ಇಡೀ ದಿನ ನಡೆಯುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಗಾಯಕ, ಕವಿ, ಸಾಹಿತಿ ರಹೀಂ ಬಿ ಸಿ ರೋಡು ಅವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ವತಿಯಿಂದ ಅಧಿಕೃತವಾಗಿ ಆಹ್ವಾನಿಸಿ ಗೌರವ ಸಲ್ಲಿಸಲಾಯಿತು. 

ಈ ಸಂದರ್ಭ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು ಎಚ್, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹನೀಫ್, ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಪ್ರಧಾನ ಕಾರ್ಯದರ್ಶಿ ಪಿ ಎಂ ಅಶ್ರಫ್ ಪಾಣೆಮಂಗಳೂರು, ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಸಂಚಾಲಕ ಪಿ ಎ ರಹೀಂ, ಉಪಾಧ್ಯಕ್ಷರಾದ ಯು ಮುಸ್ತಫಾ, ಯೂಸುಫ್ ಕರಂದಾಡಿ, ಪ್ರಧಾನ ಕಾರ್ಯದರ್ಶಿ ಲತೀಫ್ ನೇರಳಕಟ್ಟೆ, ಪ್ರಮುಖರಾದ ಅಬ್ದುಲ್ ರಝಾಕ್ ಅನಂತಾಡಿ, ಪಿ ಮುಹಮ್ಮದ್, ಹನೀಫ್ ಬಗ್ಗುಮೂಲೆ, ಬ್ಯಾರಿ ಅಕಾಡೆಮಿ ಸದಸ್ಯ ಅಬೂಬಕ್ಕರ್ ಅನಿಲಕಟ್ಟೆ ಮೊದಲಾದವರು ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಸಂಘಟಕರಿಂದ ಅಧಿಕೃತ ಆಹ್ವಾನ Rating: 5 Reviewed By: karavali Times
Scroll to Top