ಮಂಗಳೂರು, ಮೇ 27, 2026 (ಕರಾವಳಿ ಟೈಮ್ಸ್) : ಬೀಟ್ ಕರ್ತವ್ಯದಲ್ಲಿದ್ದ ವೇಳೆ ಸ್ಕೂಟರಿನಲ್ಲಿ ಬಂದು ಸಿಮೆಂಟ್ ಶೀಟಿನಲ್ಲಿ ಹಲ್ಲೆಗೈದು ಗಾಯಗೊಳಿಸಿದ್ದ ಇಬ್ಬರು ಆರೋಪಿಗಳನ್ನು ಉರ್ವ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ, ಕೊಕ್ಕಡ-ಅರಸಿನಮಕ್ಕಿ ನಿವಾಸಿ ಸಚಿನ್ ಕೆ ಆರ್ (24) ಹಾಗೂ ಪುತ್ತೂರು ತಾಲೂಕು, ನೆಲ್ಯಾಡಿ ಗ್ರಾಮದ ಮಣ್ಣಗುಂಡಿ ನಿವಾಸಿ ಚಂದನ್ (24) ಎಂದು ಹೆಸರಿಸಲಾಗಿದೆ.
ಮೇ 24 ರಂದು ಬೆಳಗಿನ ಜಾವ ಸುಮಾರು 2.10 ರ ವೇಳೆಗೆ ಉರ್ವ ಪೆÇಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೆÇಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕಲ್ ಸ್ಕೂಟರಿನಲ್ಲಿ ಬಂದ ಇಬ್ಬರು ಯುವಕರಲ್ಲಿ, ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಏಕಾಏಕಿ ಸಿಮೆಂಟ್ ಶೀಟಿನ ತುಂಡಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪೆÇಲೀಸ್ ಸಿಬ್ಬಂದಿಯ ತಲೆಗೆ ಹೊಡೆದು ಹಲ್ಲೆ ನಡೆಸಿದ್ದ ಪರಿಣಾಮವಾಗಿ ಪೆÇಲೀಸ್ ಸಿಬ್ಬಂದಿಯ ತಲೆಗೆ ಗಾಯವಾಗಿತ್ತು. ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಯತ್ನ ನಡೆಸಿರುವ ಬಗ್ಗೆ, ಮಂಗಳೂರು ಉರ್ವ ಪೆÇಲೀಸ್ ಠಾಣೆಯಲ್ಲಿ ಈ ಬಗ್ಗೆ ಅಪರಾಧ ಕ್ರಮಾಂಕ 57/2026 ಕಲಂ 121(1), 109, 132, 3(5) ಬಿ.ಎನ್.ಎಸ್ ಪ್ರಕಾರ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿ ಪ್ರರಕಣವನ್ನು ಭೇಧಿಸಿದ ಪೊಲೀಸರು ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಗುರುತಿಸಿ ತನಿಖೆಯಲ್ಲಿ ದೊರಕಿತ ಸಾಕ್ಷ್ಯಾಧಾರ ಮತ್ತು ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞÂಗಾಡ್ ಎಂಬಲ್ಲಿ ಮೇ 26 ರಂದು ಸಿಸಿಬಿ ಪೆÇಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ಕ್ರಮಕ್ಕಾಗಿ ಉರ್ವ ಪೆÇಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸಿ ಕೃತ್ಯಕ್ಕೆ ಉಪಯೋಗಿಸಿರುವ ಬೈಕನ್ನು ಅಮಾನತ್ತು ಮಾಡಿದ್ದು, ತನಿಖೆ ಮುಂದುವರೆಸಿದ್ದಾರೆ.
ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿಗಳ ಪೈಕಿ ಸಚಿನ್ ಕೆ.ಆರ್ ಎಂಬಾತನು ಕುಂಟಿಕಾನದ ಪ್ಯಾಕ್ಟರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಮತ್ತೊಬ್ಬ ಆರೋಪಿ ಚಂದನ್ ಕೂಳೂರಿನ ಅದ್ವೈತ್ ಕಿಯಾ ಶೋ ರೂಮಲ್ಲಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದನು. ಮದ್ಯರಾತ್ರಿ 2 ಗಂಟೆಯ ವೇಳೆಗೆ ನಗರದಲ್ಲಿ ಸುತ್ತಾಡುತ್ತಿದ್ದ ಆರೋಪಿಗಳನ್ನು ಬೀಟ್ ಪೆÇಲೀಸರು ತಡೆದು ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡು ಪೆÇಲೀಸರ ಮೇಲೆ ಸಿಮೆಂಟ್ ಶೀಟ್ ತುಂಡಿನಿಂದ ಹಲ್ಲೆ ನಡೆಸಿರುವುದು ತನಿಖೆಯಿಂದ ತಿಳಿದು ಬಂದಿದೆ.























0 comments:
Post a Comment