ಬಂಟ್ವಾಳ, ಮೇ 30, 2026 (ಕರಾವಳಿ ಟೈಮ್ಸ್) : ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಚಾಲಕ ಯಾವುದೇ ಪೂರ್ವ ಸೂಚನೆ ನೀಡದೆ ಏಕಾಏಕಿ ಹೆದ್ದಾರಿಗೆ ಪ್ರವೇಶ ಪಡೆದ ಪರಿಣಾಮ ಹೆದ್ದಾರಿಯಲ್ಲಿ ಬರುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಸವಾರೆ ಗಾಯಗೊಂಡ ಘಟನೆ ನಾವೂರು ಗ್ರಾಮದ ಗ್ರೀನ್ ನರ್ಸರಿ ಬಳಿ ಮೇ 28 ರಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರೆಯನ್ನು ಕಾವಳಪಡೂರು ಗ್ರಾಮದ ಪ್ರಕೃತಿ (28) ಎಂದು ಹೆಸರಿಸಲಾಗಿದೆ. ಇವರು ತನ್ನ ಸ್ಕೂಟರಿನಲ್ಲಿ ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಬಿ ಸಿ ರೋಡು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತಿದ್ದ ವೇಳೆ ನಾವೂರು ಗ್ರಾಮದ ಗ್ರೀನ್ ನರ್ಸರಿ ಬಳಿ ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕ ಜಾನ್ ಅವರು ಯಾವುದೇ ಪೂರ್ವ ಸೂಚನೆ ನೀಡದೆ ಹೆದ್ದಾರಿಗೆ ಚಲಾಯಿಸಿದ ಪರಿಣಾಮ ಸ್ಕೂಟರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ರಸ್ತೆಗೆ ಬಿದ್ದ ಸ್ಕೂಟರ್ ಸವಾರೆ ಕುಮಾರಿ ಪ್ರಕೃತಿ ಅವರ ಕೈ-ಕಾಲು ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






















0 comments:
Post a Comment