ಚಿಪ್ಪು ಹಂದಿಯ ಚಿಪ್ಪುಗಳ ಅಕ್ರಮ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳು ಅರಣ್ಯ ಸಂಚಾರಿ ದಳ ಪೊಲೀಸರ ಬಲೆಗೆ - Karavali Times ಚಿಪ್ಪು ಹಂದಿಯ ಚಿಪ್ಪುಗಳ ಅಕ್ರಮ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳು ಅರಣ್ಯ ಸಂಚಾರಿ ದಳ ಪೊಲೀಸರ ಬಲೆಗೆ - Karavali Times

728x90

6 May 2026

ಚಿಪ್ಪು ಹಂದಿಯ ಚಿಪ್ಪುಗಳ ಅಕ್ರಮ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳು ಅರಣ್ಯ ಸಂಚಾರಿ ದಳ ಪೊಲೀಸರ ಬಲೆಗೆ

ಮಂಗಳೂರು, ಮೇ 06, 2026 (ಕರಾವಳಿ ಟೈಮ್ಸ್) : ನಗರದ ಕದ್ರಿ ಉದ್ಯಾನವನದ ಬಳಿಯಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಬೆಂಗಳೂರಿನ ಎಚ್ ಆರ್ ಜಗದೀಶ (50), ಕನಕಪುರ ನಿವಾಸಿ ಸಿದ್ದು ನಾಯ್ಕ (38), ಬನಶಂಕರಿ ನಿವಾಸಿ ಬಾಬು (48) ಎಂಬವರನ್ನು ಮಂಗಳೂರು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಮಂಗಳವಾರ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

ಆರೋಪಿಗಳಿಂದ ಚಿಪ್ಪು ಹಂದಿಯ 5.200 ಕಿ. ಗ್ರಾಂ ತೂಕದ ಚಿಪ್ಪು ಹಾಗೂ ಅಂದಾಜು ಮೌಲ್ಯ 3 ಲಕ್ಷ ಮೌಲ್ಯದ ಕೆ.ಎ 05 ಎಂ.ಎಸ್ 1049 ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬೆಂಗಳೂರು ಮತ್ತು ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಅವರ ಮಾರ್ಗದರ್ಶನದಲ್ಲಿ ಮಂಗಳೂರು ಸಿ.ಐ.ಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್ ಹಾಗೂ ಸಿಬ್ಬಂದಿಗಳಾದ ತಾರನಾಥ ಎಸ್ ಮತ್ತು ಅಬ್ದುಲ್ ರವೂಫ್ ಭಾಗವಹಿಸಿದ್ದರು. 

ಅರಣ್ಯ ಕಾಯ್ದೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಸಂಬಂಧಪಟ್ಟ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ  ಮಡಿಕೇರಿ ಸಿಐಡಿ ಅರಣ್ಯ ಘಟಕ ಪೊಲೀಸ್ ಅಧೀಕ್ಷಕರ ಕಛೇರಿ ಪೊನ್ ನಂಬರ್ 9480800220 ಅಥವಾ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಮಂಗಳೂರು ಕಛೇರಿ ಪೊನ್ ಸಂಖ್ಯೆ 8277949810 ಸಂಪರ್ಕಿಸಬಹುದು ಎಂದು ಮಡಿಕೇರಿ ಸಿ.ಐ.ಡಿ ಅರಣ್ಯ ಘಟಕದ ಪೊಲಿಸ್ ಅಧೀಕ್ಷಕರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಚಿಪ್ಪು ಹಂದಿಯ ಚಿಪ್ಪುಗಳ ಅಕ್ರಮ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳು ಅರಣ್ಯ ಸಂಚಾರಿ ದಳ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top