ಬೆಳ್ತಂಗಡಿ, ಮೇ 21, 2026 (ಕರಾವಳಿ ಟೈಮ್ಸ್) : ಮೂವರು ಯುವತಿಯರೊಂದಿಗೆ ಮೇ 20 ರಂದು ಜಲಪಾತಕ್ಕೆ ತೆರಳಿದ ಮೂವರು ಯುವಕರು ಯವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು, ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರೊಂದಿಗೆ ಮೇ 20 ರಂದು ಬೆಳ್ತಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಜಲಪಾತಕ್ಕೆ ತೆರಳಿರುತ್ತಾರೆ. ಈ ವೇಳೆ ಸದ್ರಿ ಯುವಕರು, ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುತ್ತಾರೆ. ಸಂತ್ರಸ್ತ ಯುವತಿಯರು ಆಗ ಪ್ರತಿರೋಧಿಸಿದ್ದು, ಸ್ಥಳದಲ್ಲಿದ್ದ ಜನರು ಯುವಕರನ್ನು ತಡೆದು, ಬೆಳ್ತಂಗಡಿ ಪೆÇಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. ಮೂವರು ಯುವಕರನ್ನು ಪೆÇಲೀಸರು ಬೆಳ್ತಂಗಡಿ ಠಾಣೆಗೆ ಕರೆತಂದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ. ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.













0 comments:
Post a Comment