ಬೆಂಗಳೂರು, ಮೇ 30, 2026 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್ ಹೆಸರನ್ನು ಅಧಿಕೃತವಾಗಿ ಘೋಷಿಸಿದರು. ಇದರ ಬೆನ್ನಲ್ಲೇ ಸಿ ಎಲ್ ಪಿ ನಾಯಕ ಡಿ ಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಡಿಕೆಶಿಗೆ ಆಹ್ವಾನವನ್ನೂ ನೀೀಡಿದ್ದಾರೆ. ಜೂನ್ 3 ರಂದು ಬುಧವಾರ ಸಂಜೆ 4.05ಕ್ಕೆ ಡಿ ಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.






















0 comments:
Post a Comment