ಬಂಟ್ವಾಳ, ಮೇ 26, 2026 (ಕರಾವಳಿ ಟೈಮ್ಸ್) : ಹಿರಿಯ ದಫ್ ಉಸ್ತಾದ್, ಸುರಿಬೈಲು ಮಸೀದಿ ಬಳಿ ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ (87) ಅವರು ಅಲ್ಪಕಾಲದ ಅನಾರೋಗ್ಯದಿಂದ ಮೇ 26 ರಂದು ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.
ಸುರಿಬೈಲು ಕೇಂದ್ರ ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಮುಅಝ್ಝಿನ್ (ಮುಕ್ರಿ) ಆಗಿ ಸೇವೆ ಸಲ್ಲಿಸಿದ್ದ ಇವರು, ಆಧ್ಯಾತ್ಮಿಕ ಮಹತ್ವ ಹೊಂದಿರುವ ಪವಿತ್ರ ಇಸ್ಲಾಮಿನ ಸಾಂಪ್ರದಾಯಿಕ ದಫ್ ರಾತೀಬುಗೆ ನೇತೃತ್ವ ವಹಿಸುತ್ತಿದ್ದರು. ಪರಿಸರದದಲ್ಲಿ ಪುರುಷರು ಮರಣ ಹೊಂದಿದರೆ ಮಯ್ಯಿತ್ ಪರಿಪಾಲನೆ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಉತ್ತಮ ಗುಣವನ್ನು ಅವರು ಮೈಗೂಡಿಸಿಕೊಂಡಿದ್ದರು. ಇವರ ದಫ್ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಿತ್ತು. ಮೃತರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧು-ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ದಫ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಲತೀಫ್ ನೇರಳಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿ ಪಿ ಎಂ ಅಶ್ರಫ್ ಪಾಣೆಮಂಗಳೂರು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.











0 comments:
Post a Comment