ಮಂಚಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬೃಹತ್ ಕಾರ್ಯಾಚರಣೆ : 42 ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಖದೀಮರ ಬಂಧನ - Karavali Times ಮಂಚಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬೃಹತ್ ಕಾರ್ಯಾಚರಣೆ : 42 ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಖದೀಮರ ಬಂಧನ - Karavali Times

728x90

3 May 2026

ಮಂಚಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬೃಹತ್ ಕಾರ್ಯಾಚರಣೆ : 42 ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಖದೀಮರ ಬಂಧನ

 ಬಂಟ್ವಾಳ, ಮೇ 03, 2026 (ಕರಾವಳಿ ಟೈಮ್ಸ್) : ಮಂಚಿ ಗ್ರಾಮದ ಪಂಜಾಲ ಕ್ರಾಸ್ ಎಂಬಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳು, ವಾಹನ ಸಹಿತ ಇಬ್ಬರು ಖದೀಮರನ್ನು ಬಂಧಿಸಿದ ಘಟನೆ ಮೇ 2 ರಂದು ನಡೆದಿದೆ. 

ಬಂಧಿತ ಆರೋಪಿಗಳನ್ನು ಬೋಳಂತೂರು ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಆತನ ಸಹೋದರ ಮೊಹಮ್ಮದ್ ಶಾಹೀಂ (19) ಎಂದು ಹೆಸರಿಸಲಾಗಿದೆ. ಮೇ 2 ರಂದು ಮಂಚಿ ಗ್ರಾಮದ ಪಂಜಾಲ ಕ್ರಾಸ್ ಎಂಬಲ್ಲಿ ಎಂಡಿಎಂಎ ಸಾಗಾಟ ಮಾಡಲಾಗುತ್ತಿದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೈ ಮಂಜುನಾಥ ಟಿ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಗಿದೆ. ಸ್ಥಳದಲ್ಲಿ ಸದರಿ ಮಾರ್ಗವಾಗಿ ಬರುತ್ತಿದ್ದ ಕೆಎ20 ಝಡ್ 9585 ನೋಂದಣಿ ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ನಿಲ್ಲಿಸಿದಾಗ ಆರೋಪಿಗಳು ಮಾದಕ ವಸ್ತು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. 

ಆರೋಪಿಗಳನ್ನು ವಿಚಾರಿಸಿದಾಗ ಆರೋಪಿಗಳು ಬೆಂಗಳೂರಿನಲ್ಲಿ ಅಪರಿಚಿತ ನೈಜೀರಿಯಾದ ವ್ಯಕ್ತಿಯೊಬ್ಬರಿಂದ ಎಂಡಿಎಂಎ ಖರೀದಿಸಿ, ಮಾರಾಟ ಮಾಡಲು ಸಾಗಿಸುತ್ತಿರುವುದು ತಿಳಿದು ಬಂದಿದೆ. ಅವರುಗಳನ್ನು ಹಾಗೂ ವಾಹನ ತಪಾಸಣೆ ನಡೆಸಿದಾಗ 42.30 ಲಕ್ಷ ರೂಪಾಯಿ ಮೌಲ್ಯದ 423 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ಮಾದಕ ವಸ್ತು ಸಹಿತ ಅರೋಪಿಗಳ ಬಳಿಯಿದ್ದ 3 ಮೊಬೈಲ್ ಫೆÇೀನುಗಳು ಹಾಗೂ ಕೃತ್ಯಕ್ಕೆ ಬಳಸಿದ ಬೊಲೇರೊ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೊತ್ತ 46.25 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಂಚಿಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬೃಹತ್ ಕಾರ್ಯಾಚರಣೆ : 42 ಲಕ್ಷ ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಖದೀಮರ ಬಂಧನ Rating: 5 Reviewed By: karavali Times
Scroll to Top