ಮುಲ್ಕಿ ಪೊಲೀಸರ ಕಾರ್ಯಾಚರಣೆ : ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಅರೆಸ್ಟ್, 35 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ - Karavali Times ಮುಲ್ಕಿ ಪೊಲೀಸರ ಕಾರ್ಯಾಚರಣೆ : ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಅರೆಸ್ಟ್, 35 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ - Karavali Times

728x90

12 May 2026

ಮುಲ್ಕಿ ಪೊಲೀಸರ ಕಾರ್ಯಾಚರಣೆ : ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಅರೆಸ್ಟ್, 35 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

ಮಂಗಳೂರು, ಮೇ 13, 2026 (ಕರಾವಳಿ ಟೈಮ್ಸ್) :  ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ ಯುವತಿಯನ್ನು ಮುಲ್ಕಿ ಪೊಲೀಸರು ಮೇ 12 ರಂದು ಬಂಧಿಸಿದ್ದಾರೆ. 

ಬಂಧಿತ ಆರೋಪಿತೆಯನ್ನು ಶಿವಮೊಗ್ಗ ಜಿಲ್ಲೆಯ, ಸಾಗರ ತಾಲೂಕಿನ ಹುಲಿದೇವರ ಬನ ನಿವಾಸು ದಿವಂಗತ ಮೊಹಮ್ಮದ್ ಗೌಸ್ ಎಂಬವರ ಪುತ್ರಿ, ಪ್ರಸ್ತುತ ಕುಂದಾಪುರ ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಸುಹಾನ (21) ಎಂದು ಹೆಸರಿಸಲಾಗಿದೆ. 

ಬಂಧಿತೆಯ ಬಳಿಯಿಂದ ಸುಮಾರು 35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಮ್ ಹೈಡ್ರೊವಿಡ  ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೆÇೀನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಸದ್ರಿ ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿದೆ. ಈಕೆಯ ವಿರುದ್ದ ಮುಲ್ಕಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆರೋಪಿತೆಯ ವಿರುದ್ದ ಕಾವೂರು ಠಾಣೆಯಲ್ಲಿ ಹಾಗೂ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮುಲ್ಕಿ ಪೊಲೀಸರ ಕಾರ್ಯಾಚರಣೆ : ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಶಿವಮೊಗ್ಗ ಮೂಲದ ವಿದ್ಯಾರ್ಥಿನಿ ಅರೆಸ್ಟ್, 35 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ Rating: 5 Reviewed By: karavali Times
Scroll to Top