ಬ್ಯಾರಿ ಸಾಹಿತ್ಯಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ : ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹನೀಫ್ ಹಾಜಿ - Karavali Times ಬ್ಯಾರಿ ಸಾಹಿತ್ಯಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ : ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹನೀಫ್ ಹಾಜಿ - Karavali Times

728x90

13 May 2026

ಬ್ಯಾರಿ ಸಾಹಿತ್ಯಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ : ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹನೀಫ್ ಹಾಜಿ

ಬಂಟ್ವಾಳ, ಮೇ 14, 2026 (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ಕಾಲು ಶತಮಾನಗಳ ಬಳಿಕ ಯಶಸ್ವಿ ಬ್ಯಾರಿ ಸಾಹಿತ್ಯ ಸಮ್ಮೇಳನ ಆಯೋಜನೆಯಾಗಿದೆ. ಇದರ ಯಶಸ್ಸಿನ ಹಿಂದಿರುವ ಪ್ರತಿಯೊಬ್ಬರಿಗೂ ಕೃತಜ್ಞತೆಗಳು ಎಂದು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಹೇಳಿದರು. 

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಸಹಯೋಗದಲ್ಲಿ ಪಾಣೆಮಂಗಳೂರಿನ ಆಲಡ್ಕದ ಎಸ್ ಎಸ್ ಆಡಿಟೋರಿಯಂ ಇಲ್ಲಿನ ಮರ್ ಹೂಂ ಫಾರೂಕ್ ಗೂಡಿನಬಳಿ ದ್ವಾರ, ಮರ್ ಹೂಂ ಮಹಮ್ಮದ್ ಮಾರಿಪಳ್ಳ ಸಭಾಂಗಣ, ಮರ್ ಹೂಂ ಹಾಜಿ ಜಿ ಅಬ್ದುಲ್ ಖಾದರ್ ವೇದಿಕೆಯಲ್ಲಿ ಮೇ 12 ರಂದು ನಡೆದ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನ ಯಾವಾಗಲೋ ಒಮ್ಮೆ ನಡೆಸಿ ಸುಮ್ಮನಿದ್ದರೆ, ಭಾಷೆಯ ಅಭಿವೃದ್ದಿಯೂ ಸಾಧ್ಯವಿಲ್ಲ. ಸಾಹಿತ್ಯದ ಕೃಷಿಯೂ ಸಾಧ್ಯವಿಲ್ಲ. ಸಾಹಿತ್ಯ ಸಂಬಂಧಿ ಕಾರ್ಯಕ್ರಮಗಳು ನಿರಂತರವಾಗಿ ನಡೆದಾಗ ಎಲ್ಲವೂ ಸಾಧ್ಯ. ಈ ಬಗ್ಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಾಜ್ಯಾದ್ಯಂತ ಸಾಹಿತ್ಯಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಬೇಕು. ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಒಟ್ಟು ಸೇರಬೇಕು ಎಂದು ಆಗ್ರಹಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಬ್ಯಾರಿ ಸಾಹಿತ್ಯಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ : ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹನೀಫ್ ಹಾಜಿ Rating: 5 Reviewed By: karavali Times
Scroll to Top