ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧಾರ್ಮಿಕ ಪದ್ದತಿಯ ವಸ್ತ್ರಧಾರಣೆಗೆ ಅವಕಾಶ ನೀಡಿ ರಾಜ್ಯ ಸರಕಾರ ಆದೇಶ : ಬಿಜೆಪಿ ವಿಧಿಸಿದ್ದ ನಿರ್ಬಂಧ ಆದೇಶ ವಾಪಸ್ ಪಡೆದ ಸಿದ್ದರಾಮ್ಯ ಸರಕಾರ - Karavali Times ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧಾರ್ಮಿಕ ಪದ್ದತಿಯ ವಸ್ತ್ರಧಾರಣೆಗೆ ಅವಕಾಶ ನೀಡಿ ರಾಜ್ಯ ಸರಕಾರ ಆದೇಶ : ಬಿಜೆಪಿ ವಿಧಿಸಿದ್ದ ನಿರ್ಬಂಧ ಆದೇಶ ವಾಪಸ್ ಪಡೆದ ಸಿದ್ದರಾಮ್ಯ ಸರಕಾರ - Karavali Times

728x90

13 May 2026

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧಾರ್ಮಿಕ ಪದ್ದತಿಯ ವಸ್ತ್ರಧಾರಣೆಗೆ ಅವಕಾಶ ನೀಡಿ ರಾಜ್ಯ ಸರಕಾರ ಆದೇಶ : ಬಿಜೆಪಿ ವಿಧಿಸಿದ್ದ ನಿರ್ಬಂಧ ಆದೇಶ ವಾಪಸ್ ಪಡೆದ ಸಿದ್ದರಾಮ್ಯ ಸರಕಾರ

ಬೆಂಗಳೂರು, ಮೇ 14, 2026 (ಕರಾವಳಿ ಟೈಮ್ಸ್) : ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸುವ ವಿಚಾರಕ್ಕೆ ಸಂಬಂಧಿಸಂತೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಬುಧವರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದಿರುವ ಸರಕಾರ ಈ ಹೊಸ ಆದೇಶ ಹೊರಡಿಸಿದೆ. 

ಕರ್ನಾಟಕ ಶಿಕ್ಷಣ ಕಾಯ್ದೆ, 1983 ರ ಅಡಿಯಲ್ಲಿ ಹೊರಡಿಸಲಾದ ಹೊಸ ಸರ್ಕಾರಿ ಆದೇಶದಲ್ಲಿ, ಮೇ 13 ರಂದು ರಾಜ್ಯವು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಜನಿವಾರ, ಪವಿತ್ರ ದಾರ, ಶಿವದಾರ, ರುದ್ರಾಕ್ಷಿ, ಪೇಟ ಅಥವಾ ಟರ್ಬನ್, ತಲೆ ವಸ್ತ್ರ ಅಥವಾ ಹಿಜಾಬ್ ಇತರೆ ಯಾವುದೇ ಸ್ವರೂಪದ ಸಾಂಪ್ರದಾಯಿಕ ಸಂಕೇತವನ್ನು ನಿಗದಿಪಡಿಸಲಾದ ಸಮವಸ್ತ್ರ ಜೊತೆಗೆ ಧರಿಸಬಹುದು. ಸಾಂಪ್ರದಾಯಿಕ ಮತ್ತು ಪದ್ಧತಿ ಆಧಾರಿತ ಸಂಕೇತ ಸಮವಸ್ತ್ರಕ್ಕೆ ಪೂರಕವಾಗಿರಬೇಕು. ಸಮವಸ್ತ್ರ ಬದಲಿಸುವ, ಮಾರ್ಪಡಿಸುವ ಅಥವಾ ವಿಫಲಗೊಳಿಸುವಂತಿರಬಾರದು ಎಂದು ಆದೇಶಿಸಲಾಗಿದೆ. 

ಕೋರಮಂಗಲದ ಕಾಲೇಜಿನಲ್ಲಿ ಎಪ್ರಿಲ್ 24ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಮಯದಲ್ಲಿ ಪರೀಕ್ಷಾ ಹಾಲ್‍ಗೆ ಪ್ರವೇಶಿಸುವ ಮೊದಲು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ತಾಕೀತು ಮಾಡಿದ ಪ್ರಕರಣದ ಬಳಿಕ ಸರಕಾರ ಈ ಆದೇಶ ಹೊರಡಿಸಿದೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಯಾವುದೇ ವಿದ್ಯಾರ್ಥಿಯು ಅಂತಹ ಅನುಮತಿಸಲಾದ ಚಿಹ್ನೆಗಳನ್ನು ಧರಿಸಿದ್ದಕ್ಕಾಗಿ ತರಗತಿ ಕೊಠಡಿಗಳು, ಪರೀಕ್ಷಾ ಸಭಾಂಗಣಗಳು ಅಥವಾ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರವೇಶವನ್ನು ನಿರಾಕರಿಸಬಾರದು. ಯಾವುದೇ ವಿದ್ಯಾರ್ಥಿಯನ್ನು ಅಂತಹ ಚಿಹ್ನೆಗಳನ್ನು ಧರಿಸಲು ಅಥವಾ ತೆಗೆದುಹಾಕಲು ಒತ್ತಾಯಿಸಲಾಗುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದರು.

ಉಡುಪಿಯಲ್ಲಿ ಶುರುವಾದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ 2022ರಲ್ಲಿ ಬಿಜೆಪಿ ಸರಕಾರ ಹೊರಡಿಸಿದ್ದ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸುವ ಕುರಿತ ಆದೇಶವನ್ನು ಇಂದು ಸಿದ್ದರಾಮಯ್ಯ ಸರ್ಕಾರ ಹಿಂಪಡೆದಿದೆ. ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶದ ಮೂಲಕ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಲಾಗಿತ್ತು. ಇದೀಗ ಈ ಅದೇಶವನ್ನು ವಾಪಸ್ ಪಡೆಯಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧಾರ್ಮಿಕ ಪದ್ದತಿಯ ವಸ್ತ್ರಧಾರಣೆಗೆ ಅವಕಾಶ ನೀಡಿ ರಾಜ್ಯ ಸರಕಾರ ಆದೇಶ : ಬಿಜೆಪಿ ವಿಧಿಸಿದ್ದ ನಿರ್ಬಂಧ ಆದೇಶ ವಾಪಸ್ ಪಡೆದ ಸಿದ್ದರಾಮ್ಯ ಸರಕಾರ Rating: 5 Reviewed By: karavali Times
Scroll to Top